Karnataka Hijab Verdict: ಸುದೀರ್ಘ 11 ದಿನಗಳ ವಿಚಾರಣೆ ಬಳಿಕ ಹೈಕೋರ್ಟ್‌ ಮಹತ್ವದ ತೀರ್ಪು!

Karnataka Hijab Verdict: ಸುದೀರ್ಘ 11 ದಿನಗಳ ವಿಚಾರಣೆ ಬಳಿಕ ಹೈಕೋರ್ಟ್‌ ಮಹತ್ವದ ತೀರ್ಪು!

Published : Mar 15, 2022, 04:34 PM ISTUpdated : Mar 15, 2022, 04:40 PM IST

*ಹಿಜಾಬ್‌ ವಿವಾದ: ಕರ್ನಾಟಕ ಹೈಕೋರ್ಟ್‌ ಮಹತ್ವದ ತೀರ್ಪು
*ಹಿಜಾಬ್‌ ಇಸ್ಲಾಮಿನ ಅವಿಭಾಜ್ಯ ಅಂಗ ಅಲ್ಲ ಎಂದ ನ್ಯಾಯಾಲಯ
*ಸರ್ಕಾರದ ಆದೇಶ ಎತ್ತಿ ಹಿಡಿದ ಉಚ್ಚ ನ್ಯಾಯಾಲಯ 
 

ಬೆಂಗಳೂರು (ಮಾ. 15): ಭಾರಿ ವಿವಾದಕ್ಕೆ ಕಾರಣವಾಗಿ ವಿಶ್ವಮಟ್ಟದಲ್ಲಿ ಗಮನ ಸೆಳೆದ ಹಿಜಾಬ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮಂಗಳವಾರ ಬೆಳಗ್ಗೆ ಮಹತ್ವದ ತೀರ್ಪು ಪ್ರಕಟಿಸಿದ್ದು, ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ ಎಂದಿದೆ. ಅಲ್ಲದೇ ಶಾಲೆಗೆ ಕೇಸರಿ ಶಾಲು, ಹಿಜಾಬ್ ಆಗಲಿ ಯಾವುದೂ ಧರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿದ್ದ ಕರ್ನಾಟಕ ಸರ್ಕಾರದ ಆದೇಶವನ್ನು ಕೋರ್ಟ್‌ ಎತ್ತಿ ಹಿಡಿದಿದೆ.

ಇದನ್ನೂ ಓದಿ: Karnataka Hijab Verdict ಈ ಪ್ರಕರಣದಲ್ಲಿ "ಕಾಣದ ಕೈಗಳು" ಕೆಲಸ ಮಾಡಿದ್ದು ಸತ್ಯ ಎಂದ ಹೈಕೋರ್ಟ್!

ಹಿಜಾಬ್‌ ಧರಿಸಿ ಶಾಲಾ-ಕಾಲೇಜಿನ ತರಗತಿಗಳಿಗೆ ಹಾಜರಾಗುವುದನ್ನು ನಿಷೇಧಿಸುವ ಮತ್ತು ಸಮವಸ್ತ್ರವನ್ನು ನಿರ್ಧರಿಸುವ ಜವಾಬ್ದಾರಿಯನ್ನು ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ (ಸಿಡಿಸಿ) ವಹಿಸಿ ರಾಜ್ಯ ಸರ್ಕಾರ ಫೆ.5ರಂದು ಹೊರಡಿಸಿತ್ತು. ಈ ಆದೇಶ ರದ್ದು ಕೋರಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್‌ ಮತ್ತಿತರೆ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಏಳು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ವಜಾಗೊಳಿಸಿ ಕರ್ನಾಟಕ ಹೈ ಕೋರ್ಟ್‌ ಈಗ ಮಹತ್ವದ ತೀರ್ಪು ನೀಡಿದೆ. ಹೈ ಕೋರ್ಟ್‌ನ ತೀರ್ಪಿನ ಹೈಲೈಟ್ಸ್‌ ಇಲ್ಲಿದೆ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more