Dec 12, 2021, 1:31 AM IST
ಕೊಪ್ಪಳ, (ಡಿ.12): ಕರ್ನಾಟಕ ರಾಜ್ಯದಲ್ಲಿ 1 ರಿಂದ 8ನೇ ತರಗತಿವರೆಗೆ ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮೊಟ್ಟೆ ವಿತರಣೆಗೆ ಕೆಲ ಸ್ವಾಮೀಜಿಗಳು ವಿರೋಧ ವ್ಯಕ್ತಪಡಿಸಿದ್ದು, ಆದೇಶವನ್ನ ವಾಪಸ್ ಪಡೆದುಕೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇನ್ನು ಸ್ವಾಮೀಜಿಗಳ ವಿರೋಧಕ್ಕೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Egg Distribution in School ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಪೇಜಾವರ ಶ್ರೀ ವಿರೋಧ
ಹೌದು....ಶಾಲೆಯಲ್ಲಿ ಮೊಟ್ಟೆ ನೀಡಲು ಕೆಲ ಮಠಾಧೀಶರ ವಿರೋಧ ಹಿನ್ನಲೆ ಕೊಪ್ಪಳದ ಗಂಗಾವತಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ನಾವು ಒಂದಲ್ಲ ಎರಡು ಮೊಟ್ಟೆ ತಿಂತೀವಿ. ಅದನ್ನ ಕೇಳಲು ನೀವು ಯಾರು ಎಂದು ವಿದ್ಯಾರ್ಥಿನಿ ಪ್ರಶ್ನಿಸಿದ್ದಾಳೆ. ಅಲ್ಲದೇ ನಿಮ್ಮ ಮಠಕ್ಕೆ ಸ್ನಾನ ಮಾಡಿ ಬಂದು ಪೂಜೆ ಮಾಡಿಲ್ವಾ? ನಿಮಗೆ ದಕ್ಷಿಣೆ ಹಾಕಿಲ್ವಾ ಎಂದು ಪ್ರಶ್ನಿಸಿದ ವಿದ್ಯಾರ್ಥಿನಿ, ನಾವು ಮಠಕ್ಕೆ ಬಂದು ಮೊಟ್ಟೆ ತಿನ್ನುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾಳೆ. ಇದೀಗ ಈ ವಿದ್ಯಾರ್ಥಿನಿಯ ವಿಡಿಯೋ ಫುಲ್ ವೈರಲ್ ಆಗಿದೆ.