ಸುಳ್ಯ ಕೋರ್ಟ್‌ನಿಂದ ವಾರೆಂಟ್:  ಇಂದು ನ್ಯಾಯಾಲಯಕ್ಕೆ ಡಿಕೆಶಿ ಹಾಜರ್

ಸುಳ್ಯ ಕೋರ್ಟ್‌ನಿಂದ ವಾರೆಂಟ್: ಇಂದು ನ್ಯಾಯಾಲಯಕ್ಕೆ ಡಿಕೆಶಿ ಹಾಜರ್

Published : Oct 05, 2021, 11:40 AM ISTUpdated : Oct 05, 2021, 11:44 AM IST

ಸುಳ್ಯ ತಾಲೂಕು ನ್ಯಾಯಾಲಯದಿಂದ ವಾರಂಟ್‌ ಜಾರಿಯಾಗಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇಂದು ಸುಳ್ಯ ಕೋರ್ಟ್‌ಗೆ ಹಾಜರಾಗಲಿದ್ದಾರೆ. 
 

ಮಂಗಳೂರು (ಅ. 05): ಸುಳ್ಯ ತಾಲೂಕು ನ್ಯಾಯಾಲಯದಿಂದ ವಾರಂಟ್‌ ಜಾರಿಯಾಗಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇಂದು ಸುಳ್ಯ ಕೋರ್ಟ್‌ಗೆ ಹಾಜರಾಗಲಿದ್ದಾರೆ. 

ಬೆಳ್ಳಾರೆಯ ಸಾಯಿ ಗಿರಿಧರ ರೈ ಎಂಬವರು 2016 ರ ಫೆ.28 ರಂದು ಆಗಿನ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ಗೆ ದೂರವಾಣಿ ಕರೆ ಮಾಡಿ ಇಲ್ಲಿನ ವಿದ್ಯುತ್‌ ಅವ್ಯವಸ್ಥೆ ವಿಚಾರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಈ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿದರೆಂಬ ಕಾರಣಕ್ಕಾಗಿ ವಿಷಯವನ್ನು ಡಿ.ಕೆ.ಶಿವಕುಮಾರ್‌ ಆಗಿನ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದಿದ್ದರು.  ಆ ತಕ್ಷಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. 

ಈ ಪ್ರಕರಣಕ್ಕೆ ಸಂಬಂಧಿಸಿ ಇತರರೆಲ್ಲ ಸಾಕ್ಷಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರೂ ಸಾಕ್ಷಿದಾರರಲ್ಲೊಬ್ಬರಾದ ಡಿ.ಕೆ. ಶಿವಕುಮಾರ್‌ ವಾರಂಟ್‌ ಜಾರಿಗೊಳಿಸಿದ್ದರೂ ಕೋರ್ಟ್‌ಗೆ ಹಾಜರಾಗಿರಲಿಲ್ಲ. ಇದೀಗ ಎರಡನೇ ಬಾರಿ ವಾರಂಟ್‌ ಜಾರಿ ಆಗಿರುವ ಹಿನ್ನೆಲೆಯಲ್ಲಿ ಅವರು ಮಂಗಳವಾರ ಬೆಳಗ್ಗೆ 7 ಗಂಟೆಗೆ ವಿಮಾನ ಮೂಲಕ ಮಂಗಳೂರಿಗೆ ಬಂದು ಅಲ್ಲಿಂದ ಸುಳ್ಯಕ್ಕೆ ಆಗಮಿಸಿ, ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. 

 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!