ಬೆಳಗಾವಿಯ (Belagavi) ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (Santosh Suicide Case) ಪ್ರಕರಣದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa)ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಘೋಷಿಸಿದ್ದಾರೆ.
ಬೆಂಗಳೂರು (ಏ. 15): ಬೆಳಗಾವಿಯ (Belagavi) ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (Santosh Suicide Case) ಪ್ರಕರಣದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa)ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಘೋಷಿಸಿದ್ದಾರೆ. ಪಕ್ಷ, ಸರ್ಕಾರಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳುತ್ತಿರುವುದಾಗಿ ಹೇಳಿದ್ದಾರೆ.
ಇಂದು ಸಂಜೆ 6.30 ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಲಿದ್ದಾರೆ. ಗದಗ ಪ್ರವಾಸದಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ನೂರಾರು ಕಾರುಗಳಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಶಿವಮೊಗ್ಗದಿಂದ (Shivamogga)ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿಗೆ ಹೋಗುವ ದಾರಿಯುದ್ಧಕ್ಕೂ ಅದ್ದೂರಿ ಸ್ವಾಗತಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ.