ಬಿಹಾರ, ಉತ್ತರಪ್ರದೇಶದ ಕಾರ್ಮಿಕರನ್ನು ಕೊರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಬಳಸಿಕೊಳ್ಳಲಾಗುತ್ತಿದ್ದು, ಅವರಿಗೆ ಅಂತ್ಯಕ್ರಿಯೆಯ ಬಗ್ಗೆ ಸರಿಯಾದ ಮಾಹಿತಿಯೇ ಇಲ್ಲ, ಇದರ ಜತೆಗೆ ಯಾವುದೇ ಸುರಕ್ಷಿತ ಕ್ರಮಗಳನ್ನು ಅನುಸರಿಸುತ್ತಿಲ್ಲ.
ಬೆಂಗಳೂರು(ಜು.01): ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಅಂತ್ಯಕ್ರಿಯೆಗೆ ಹೊರರಾಜ್ಯದ ಕಾರ್ಮಿಕರನ್ನು ಬಳಸಿಕೊಳ್ಳುತ್ತಿದ್ದು ಇದೀಗ ಬೆಂಗಳೂರಿನ ಜನತೆಯ ನಿದ್ದೆಗೆಡಿಸುವಂತೆ ಮಾಡಿದೆ.
ಬಿಹಾರ, ಉತ್ತರಪ್ರದೇಶದ ಕಾರ್ಮಿಕರನ್ನು ಕೊರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಬಳಸಿಕೊಳ್ಳಲಾಗುತ್ತಿದ್ದು, ಅವರಿಗೆ ಅಂತ್ಯಕ್ರಿಯೆಯ ಬಗ್ಗೆ ಸರಿಯಾದ ಮಾಹಿತಿಯೇ ಇಲ್ಲ, ಇದರ ಜತೆಗೆ ಯಾವುದೇ ಸುರಕ್ಷಿತ ಕ್ರಮಗಳನ್ನು ಅನುಸರಿಸುತ್ತಿಲ್ಲ.
ಬೆಂಗಳೂರಿನ ಜೆಸಿ ನಗರದಲ್ಲಿ ನಡೆದ ಘಟನೆ ಬೆಚ್ಚಿಬೀಳುವಂತೆ ಮಾಡಿದೆ. ಅಂತ್ಯ ಕ್ರಿಯೆ ವೇಳೆ ಬಳಸಿದ ಪಿಪಿಇ ಕಿಟ್‌ಗಳನ್ನು ಸಿಬ್ಬಂದಿಯ ಅಲ್ಲಿಯೇ ಬಿಟ್ಟು ನಡೆದಿದ್ದಾರೆ. ಬಿಬಿಎಂಪಿ ಹಾಗೂ ಅರೋಗ್ಯ ಇಲಾಖೆಯ ಬೇಜವಾಬ್ದಾರಿ ಮತ್ತೊಮ್ಮೆ ಬಟಾಬಯಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ