Oct 28, 2021, 2:37 PM IST
ಬೆಂಗಳೂರು (ಅ.28): ಕಳೆದ ಒಂದು ವಾರದಿಂದ ಕನ್ನಡಕ್ಕೆ ನಾವು ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. ಈ ನಿಟ್ಟಿನಲ್ಲಿ ಇಂದು ಲಕ್ಷಾಂತರ ಜನ ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ವಿದಾನಸೌಧದ ಮೆಟ್ಟಿನಲ್ಲಿ ಲಕ್ಷಕಂಠ ಗೀತ ಗಾಯನದ ಮುಖ್ಯ ಕಾರ್ಯಕ್ರಮ ನಡೆಯಿತು.
ಕನ್ನಡ ರಾಜ್ಯೋತ್ಸವ: 1000ಕ್ಕೂ ಹೆಚ್ಚು ಸ್ಥಳಗಳಲ್ಲಿ 5 ಲಕ್ಷ ಕಂಠಗಳಲ್ಲಿ ಮೊಳಗಲಿದೆ ಕನ್ನಡ ಗೀತೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಪಾಲ್ಗೊಂಡಿದ್ದರು. ಬೆಂಗಳೂರಿನ ಕಾರ್ಯಕ್ರಮದಲ್ಲಿ ಸಚಿವ ಸುನಿಲ್ ಕುಮಾರ್, ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲ್ಗೊಂಡರೆ ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದರು.