Dec 9, 2024, 3:42 PM IST
ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟಗಾರರಿಗೆ ಸರ್ಕಾರ ಶಾಕ್ ಕೊಟ್ಟಿದೆ. ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಶುರುವಾಗಿರುವ ಹಿನ್ನೆಲೆ, ನಾಳೆ ಟ್ರ್ಯಾಕ್ಟರ್ ರ್ಯಾಲಿ ನಡೆಸುವುದಾಗಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಘೋಷಿಸಿದ್ದರು. ಆದರೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ.
ಜಿಲ್ಲಾಡಳಿತ ನಿರ್ಧಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ಹೊರಹಾಕಿದ್ದಾರೆ. ಇದು ಪ್ರಜಾಪ್ರಭುತ್ವ, ನಿರ್ಬಂಧ ಹೇರಬಾರದು ಎಂದು ಹೇಳಿರುವ ಲಕ್ಷ್ಮೀ ಹೆಬ್ಬಾಳ್ಕರ್. ಸ್ವಾಮೀಜಿಗಳ ಜೊತೆ ಹೋರಾಟದ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದಾರೆ.