ರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಕರ್ಫೂ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿರುವ ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸಿದ್ದಾರೆ.
ಬೆಂಗಳೂರು (ಮೇ. 09): ರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಕರ್ಫೂ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿರುವ ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸಿದ್ದಾರೆ. ಬೇಕಾಬಿಟ್ಟಿರಸ್ತೆಗಿಳಿದಿರುವ 8100ಕ್ಕೂ ಅಧಿಕ ವಾಹನಗಳನ್ನು ಜಪ್ತಿ ಮಾಡುವುದರೊಂದಿಗೆ ದಂಡವನ್ನೂ ವಿಧಿಸಿದ್ದಾರೆ. ಈ ಮೂಲಕ ಸೋಮವಾರದಿಂದ ಆರಂಭವಾಗಲಿರುವ ಸೆಮಿ ಲಾಕ್‌ಡೌನ್ ಮತ್ತಷ್ಟುಕಠಿಣವಾಗಿರಲಿದೆ ಎಂಬ ಪರೋಕ್ಷ ಎಚ್ಚರಿಕೆಯನ್ನೂ ರವಾನಿಸುವಲ್ಲಿ ಯಶಸ್ವಿಯಾಗಿದ್ದಾರೆ.