ಕೋಲಾರ ವಿಸ್ಟ್ರಾನ್ ಕಂಪನಿ ಮೇಲಿನ ದಾಳಿಗೆ ಚೀನಾ ಯಾಕೆ ಖುಷಿಪಡುತ್ತಿದೆ? ಏನಿದು ಷಡ್ಯಂತ್ರ?

Dec 18, 2020, 10:29 AM IST

ಬೆಂಗಳೂರು (ಡಿ. 18): ಐಫೋನ್‌ ಉತ್ಪಾದಿಸುವ ವಿಸ್ಟಾ್ರನ್‌ ಇಸ್ಫೋ ಕಾಮ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಹಿನ್ನೆಲೆಯಲ್ಲಿ ಕಂಪನಿಯ ಮಾಲೀಕರು ನೀಡಿದ ದೂರಿನ ಮೇರೆಗೆ ಪೋಲಿಸರು ವಿಸ್ಟ್ರಾನ್‌ ಕಂಪನಿಯಲ್ಲಿ ಕೆಲಸ ಮಾಡುವ 8 ಸಾವಿರ ಗುತ್ತಿಗೆ ಕಾರ್ಮಿಕರ ಪೈಕಿ 7 ಸಾವಿರ ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಂಪನಿಯು ಇವರನ್ನು ಕೆಲಸದಲ್ಲಿ ಮುಂದುವರಿಸುತ್ತದೆಯೇ ಅಥವಾ ವಜಾಗೊಳಿಸುತ್ತದೆಯೇ ಎಂಬ ಆತಂಕ ಎದುರಾಗಿದೆ. ಈ ಘಟನೆ ಚರ್ಚೆಗೆ ಗ್ರಾಸವಾಗಿದ್ದು, ಇದರ ಬೇರೆ ಬೇರೆ ಆಯಾಮಗಳ ಬಗ್ಗೆ ವಿಸ್ತೃತ ಚರ್ಚೆ ಇಲ್ಲಿದೆ. 

ಕೋಲಾರದ ವಿಸ್ಟ್ರಾನ್ ಕಂಪನಿ ಧ್ವಂಸ ಪ್ರಕರಣ ಪೂರ್ವನಿಯೋಜಿತ ಕೃತ್ಯ!