ಖಾಸಗಿ ಆಸ್ಪತ್ರೆಯಲ್ಲಿ ಸುಲಿಗೆ ಮಾಡಲು ಬಿಡೊಲ್ಲ: ಸಚಿವ ಸುಧಾಕರ್

Jun 15, 2020, 6:10 PM IST

ಬೆಂಗಳೂರು(ಜೂ.15): ಕೊರೋನಾ ಸಂಕಷ್ಟದ ಸಮಯದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಜನರನ್ನು ಸುಲಿಗೆ ಮಾಡಲು ಬಿಡುವುದಿಲ್ಲ ಎಂದು ಸುವರ್ಣ ನ್ಯೂಸ್‌ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಭರವಸೆ ನೀಡಿದ್ದಾರೆ.

ಕೊರೋನಾ ಚಿಕಿತ್ಸೆ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಜನರ ಹಣ ಸುಲಿಗೆ ಮಾಡುವ ಬಗ್ಗೆ ಸುವರ್ಣ ನ್ಯೂಸ್ ಕುಟುಕು ಕಾರ್ಯಾಚರಣೆ ಮೂಲಕ ಸರ್ಕಾರದ ಗಮನ ಸೆಳೆದಿತ್ತು. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಬಡವರ ಬೆನ್ನಿಗೆ ನಿಲ್ಲುವ ಭರವಸೆ ನೀಡಿದ ಮುಖ್ಯಮಂತ್ರಿ

ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಶೀಘ್ರದಲ್ಲೇ ದರ ನಿಗದಿಪಡಿಸಲಿದೆ. ಸಂಕಷ್ಟದ ಸಮಯದಲ್ಲಿ ಜನರ ಹಣ ಸುಲಿಗೆ ಮಾಡಲು ಸರ್ಕಾರ ಅವಕಾಶ ಮಾಡಿಕೊಡುವುದಿಲ್ಲ. ಸುಲಿಗೆ ಮಾಡುವುದು ಕಂಡು ಬಂದರೆ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸಚಿವ ಸುಧಾಕರ್ ಎಚ್ಚರಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.