ಕರ್ನಾಟಕದಲ್ಲಿ ಮರಾಠಿಗರ ಮೇಲೆ ದೌರ್ಜನ್ಯ ನಡೀತಿದೆಯಂತೆ; ಎಂಇಎಸ್‌ ಮುಖಂಡರಿಂದ ಪತ್ರ!

ಕರ್ನಾಟಕದಲ್ಲಿ ಮರಾಠಿಗರ ಮೇಲೆ ದೌರ್ಜನ್ಯ ನಡೀತಿದೆಯಂತೆ; ಎಂಇಎಸ್‌ ಮುಖಂಡರಿಂದ ಪತ್ರ!

Published : Feb 27, 2025, 09:17 PM ISTUpdated : Feb 27, 2025, 10:19 PM IST

ಬೆಳಗಾವಿಯಲ್ಲಿ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣವನ್ನು ಎಂಇಎಸ್ ಜೀವಂತವಾಗಿಡಲು ಪ್ರಯತ್ನಿಸುತ್ತಿದೆ. ಕಂಡಕ್ಟರ್ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ್ದನ್ನು ಮರೆಮಾಚಲು ಭಾಷಾ ವಿವಾದದ ಬಣ್ಣ ಬಳಿಯಲಾಗುತ್ತಿದೆ.

ಕಂಡಕ್ಟರ್‌ ಮೇಲೆ ಹಲ್ಲೆ ಪ್ರಕರಣ ವನ್ನು ಜೀವಂತವಾಗಿಡಲು ಎಂಇಎಸ್‌ ಮುಖಂಡರಿಂದ ಪ್ರಯತ್ನ ನಡೀತಿದೆ. ಕಂಡಕ್ಟರ್‌ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ್ದು, ಅದನ್ನ ಮರೆಮಾಚಲು ಪ್ರಕರಣಕ್ಕೆ ಭಾಷಾ ವಿವಾದದ ಬಣ್ಣ ಬಳಿಯಲಾಗಿದೆ. ಬೆಳಗಾವಿಯಲ್ಲಿ ಪರಾಠಿಗಳ ಮೇಲೆ ದೌರ್ಜನ್ಯ ನಡೀತಿದೆ ಎಂದು ಎಂಇಎಸ್‌ ನಾಯಕರು ಶಿವಸೇನೆ ಉದ್ಧವ್‌ ಠಾಕ್ರೆಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಭಾಷೆ ವಿಚಾರಕ್ಕೆ ಗಲಾಟೆ ಆಗಿರುವುದನ್ನು ಎಂಇಎಸ್ ಮುಖಂಡರು ಜೀವಂತವಾಗಿ ಇಡುವುದಕ್ಕೆ ಹಲವು ಕಸರತ್ತುಗಳನ್ನು ಮಾಡುತ್ತಿದೆ. ಈ ಬಗ್ಗೆ ಎಂಇಎಸ್ ಮುಖಂಡ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಳಿ ಪತ್ರದ ಮೂಲಕ ದೂರು ನೀಡಿದ್ದಾರೆ. ಜೊತೆಗೆ, ಕರ್ನಾಟಕದಲ್ಲಿ ಮರಾಠಿ ಭಾಷಿಕರ ಮೇಲೆ ಕನ್ನಡಿಗರು ಭಾರೀ ದೌರ್ಜನ್ಯವನ್ನು ಮಾಡುತ್ತಿವೆ ಎಂದು ಹೇಳಿದ್ದಾರೆ. ಜೊತೆಗೆ, ಮರಾಠಿ ಮಾತನಾಡುವ ಬಾಲಕಿ ಮೇಲೆ ಕಂಡಕ್ಟರ್ ಅನುಚಿತವಾಗಿ ನಡೆದುಕೊಂಡು, ಅದನ್ನು ಮುಚ್ಚಿ ಹಾಕಲು ಭಾಷೆಯನ್ನು ಎತ್ತಿಕಟ್ಟಿದ್ದಾರೆ ಎಂದು ಹೇಳಿದ್ದಾರೆ.

ಈ ಮೂಲಕ ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವೆ ಗಡಿ ವಿವಾದವನ್ನು ಇಟ್ಟುಕೊಂಡು ಶಿವಸೇನೆ ಹಾಗೂ ಎಂಇಎಸ್ ಮಹಾರಾಷ್ಟ್ರದಲ್ಲಿ ರಾಜಕಾರಣ ಮಾಡುತ್ತಿವೆ. ಇದೀಗ ಕಂಡಕ್ಟರ್ ಪ್ರಕರಣವನ್ನು ಜೀವಂತವಾಗಿ ಇಟ್ಟು ಹೋರಾಟ ಮುಂದುವರೆಸಲು ಮುಂದಾಗಿವೆ. ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿದ್ದ ಯುವತಿ ಹಾಗೂ ಅವರ ಮನೆಯವರೇ ದೂರನ್ನು ವಾಪಸ್ ಪಡೆದುಕೊಂಡಿದ್ದು ಬಿ ರಿಪೋರ್ಟ್ ಸಲ್ಲಿಕೆ ಮಾಡಲಾಗಿದೆ. ಆದರೂ, ಈ ಪ್ರಕರಣ ಜೀವಂತವಾಗಿ ಇಟ್ಟುಕೊಂಡು ಸ್ಥಳೀಯ ಪಂಚಾಯತ್ ಚುನಾವಣೆ ರಾಜಕಾರಣ ಮಾಡಲು ಮುಂದಾಗಿವೆ ಎಂದು ತಿಳಿದುಬಂದಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more