ಸಚಿವ ಎಸ್ ಟಿ ಸೋಮಶೇಖರ್ ಕೊರೊನಾ ಸೋಂಕಿತರ ನೆರವಿಗೆ ಧಾವಿಸಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ತಲಾ 1 ಲಕ್ಷ ರೂ ಸಹಾಯ ಧನ ಮಾಡಿದ್ದಾರೆ.
ಬೆಂಗಳೂರು (ಮೇ. 08): ಸಚಿವ ಎಸ್ ಟಿ ಸೋಮಶೇಖರ್ ಕೊರೊನಾ ಸೋಂಕಿತರ ನೆರವಿಗೆ ಧಾವಿಸಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ತಲಾ 1 ಲಕ್ಷ ರೂ ಸಹಾಯ ಧನ ಮಾಡಿದ್ದಾರೆ. ಈ ಅಭಿಯಾನಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನದ ನಿರ್ಮಲಾನಂದ ಶ್ರೀ ಚಾಲನೆ ನೀಡಿದರು. ಇನ್ನು ಮನೆಯಲ್ಲಿ ಇರುವವರಿಗೆ ದಿನಸಿ ಪ್ಯಾಕೆಟ್, ಸರ್ಕಾರಿ ಆಸ್ಪತ್ರೆಗೆ ದಾಖಲಾಗುವವರಿಗೆ 20 ಸಾವಿರ, ಖಾಸಗಿ ಆಸ್ಪತ್ರೆಗೆ ದಾಖಲಾಗುವವರಿಗೆ 50 ಸಾವಿರ ರೂ ನೀಡುವುದಾಗಿ ಎಸ್‌ಟಿ ಸೋಮಶೇಖರ್ ಹೇಳಿದ್ದಾರೆ.