Jul 28, 2022, 4:12 PM IST
ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿ/ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಹಕ್ಕೊತ್ತಾಯ ಮತ್ತೆ ಮುನ್ನೆಲೆಗೆ ಬಂದಿದೆ. ಈ ಜಿಲ್ಲೆ ಭೌಗೋಳಿಕವಾಗಿ ಅತಿ ವಿಸ್ತಾರವಾಗಿದ್ದು, ಇಲ್ಲಿ ಅಪಘಾತ ಸಂಭವಿಸಿದಾಗ ತುರ್ತಾಗಿ ಚಿಕಿತ್ಸೆ ನೀಡುವ ಟ್ರಾಮಾ ಸೆಂಟರ್, ಅತ್ಯಾಧುನಿಕ ಪರೀಕ್ಷಾ ಸಲಕರಣೆಗಳು, ಚಿಕಿತ್ಸಾ ವಿಧಾನಗಳನ್ನು ಒಳಗೊಂಡಿರುವ ಮಲ್ಟಿ/ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲ. ಇತ್ತೀಚಿನ ಐದಾರು ವರ್ಷಗಳಲ್ಲಿ ರಸ್ತೆ ಅಪಘಾತಗಳಲ್ಲಿ ಗಾಯಗೊಂಡು, ಆಸ್ಪತ್ರೆಗೆ ಸೇರುವ ಮುನ್ನ ಮೃತಪಟ್ಟವರ ಸಂಖ್ಯೆಯೇ ಹೆಚ್ಚಾಗುತ್ತಿದೆ. ಅರೆಬರೆ ಹಾಗೂ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಹೆಚ್ಚಿನ ಅಪಘಾತಕ್ಕಾಗಿ ಕಾರಣವಾಗಿದೆ.
ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಏಕೆ ಆಗಿಲ್ಲ? ಗಂಭೀರ ಕಾರಣ ಕೊಟ್ಟ ರೂಪಾಲಿ ನಾಯ್ಕ
ಜಿಲ್ಲೆಗೆ ಶೀಘ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದು, ಆ ವೇಳೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಬಗ್ಗೆ ಘೋಷಣೆ ಮಾಡುವ ವಿಶ್ವಾಸವಿದೆ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದ್ದಾರೆ. ಈಗಾಗಲೇ ಆಸ್ಪತ್ರೆ ಅವಶ್ಯಕತೆ ಬಗ್ಗೆ ಸಿಎಂ ಅವರ ಗಮನಕ್ಕೂ ತರಲಾಗಿದೆ. ಮೌಖಿಕವಾಗಿ ಒಪ್ಪಿಗೆ ನೀಡಿದ್ದಾರೆ. ಜಿಲ್ಲೆಗೆ ಆಗಮಿಸಿದಾಗ ಘೋಷಣೆ ಮಾಡುವ ಸಾಧ್ಯತೆ ಇದೆ. ಶೀಘ್ರದಲ್ಲೇ ಮಂಜೂರಾತಿ ಸಿಗುವ ವಿಶ್ವಾಸವಿದೆ ಎಂದರು.