ಬೆಳಗಾವಿ ಜಿಲ್ಲೆಯ ಎರಡು ಸ್ಥಾನಗಳಿಗೆ ನಡೆಯುತ್ತಿರುವ ಮೇಲ್ಮನೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿರುವ ಗೋಕಾಕ್ ಉದ್ಯಮಿ ಲಖನ್ ಜಾರಕಿಹೊಳಿ ಅವರು ನಾಮಪತ್ರ ವಾಪಸ್ ಪಡೆಯದಿರುವುದು ರಾಷ್ಟ್ರೀಯ ಪಕ್ಷಗಳಿಗೆ ತಲೆನೋವು ತರಿಸಿದೆ.
ಬೆಳಗಾವಿ (ನ. 27): ಜಿಲ್ಲೆಯ ಎರಡು ಸ್ಥಾನಗಳಿಗೆ ನಡೆಯುತ್ತಿರುವ ಮೇಲ್ಮನೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿರುವ ಗೋಕಾಕ್ ಉದ್ಯಮಿ ಲಖನ್ ಜಾರಕಿಹೊಳಿ (Lakhan Jarkiholi) ಅವರು ನಾಮಪತ್ರ ವಾಪಸ್ ಪಡೆಯದಿರುವುದು ರಾಷ್ಟ್ರೀಯ ಪಕ್ಷಗಳಿಗೆ ತಲೆನೋವು ತರಿಸಿದೆ. ಅವರು ಸ್ಪರ್ಧೆಯಲ್ಲೇ ಉಳಿಯುವ ಮೂಲಕ ಬಿಜೆಪಿಗಿಂತ ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚು ಸವಾಲಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ರಮೇಶ್ ಜಾರಕಿಹೊಳಿ (Ramesh Jarkiholi) ಸೋಮವಾರ ದೆಹಲಿಗೆ ಹೋಗಿ, ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ವರಿಷ್ಠರು- ಜಾರಕಿಹೊಳಿ ನಡುವಿನ ಚರ್ಚೆ ಕುತೂಹಲ ಮೂಡಿಸಿದೆ.