ಮುರುಡೇಶ್ವರ ಬೀಚ್‌ ದುರಂತ: ಜಿಲ್ಲಾಧಿಕಾರಿ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರ ವಿರುದ್ಧ ದೂರು

Dec 16, 2024, 4:34 PM IST

ಉತ್ತರಕನ್ನಡ: ಇತ್ತೀಚಿಗಿನ ದಿನಗಳಲ್ಲಿ ಮುರುಡೇಶ್ವರ ಬೀಚ್‌ನಲ್ಲಿ ಸರಣಿ ಸಾವುಗಳಾಗುತ್ತಿರುವುದಕ್ಕೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರ ವಿರುದ್ಧ ದೂರ ದಾಖಲಿಸಲಾಗಿದೆ.

2020/25 ಸುಪ್ರೀಂ ಕೋರ್ಟ್‌ ಮಾರ್ಗಸೂಚಿಗಳು ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005ರ ನಿಯಮಗಳನ್ನು ಉಲ್ಲಂಘಿಸಿದ್ದಾರೆಂದು ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರಾದ ಜಯಂತ್ ವಿರುದ್ಧ ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ್ ದೂರು ದಾಖಲಿಸಿದ್ದಾರೆ.