ಮೈಸೂರಿನ ಯುವಕನಲ್ಲಿ ಡೆಲ್ಟಾ ಪ್ಲಸ್ ವೈರಸ್ ಪತ್ತೆ

Jun 23, 2021, 1:20 PM IST

ಬೆಂಗಳೂರು (ಜೂ. 23): ಡೆಲ್ಟಾ ರೂಪಾಂತರಿ ವೈರಸ್ ಡೆಲ್ಟಾ ಪ್ಲಸ್ ವೈರಸ್ ಮೈಸೂರಿನ ಯುವಕನಲ್ಲಿ ಪತ್ತೆಯಾಗಿದೆ. 40 ಮಂದಿಯ ಸ್ಯಾಂಪಲ್ ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಡೆಲ್ಟಾ ಪ್ಲಸ್ ಸೋಂಕಿತನ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಡೆಲ್ಟಾ ಪ್ಲಸ್ ವೈರಸ್‌ಗೆ ಲಸಿಕೆಯ ಶಕ್ತಿ ಹಾಗೂ ರೋಗನಿರೋಧಕ ಶಕ್ತಿಯನ್ನು ಭೇದಿಸುವ ಸಾಮರ್ಥ್ಯವಿದೆಯಂತೆ. ದೇಶದಲ್ಲಿ 3 ನೇ ಅಲೆಗೂ ಕಾರಣವಾಗಬಹುದು ಎಂದು ತಜ್ಞರು ಅಂದಾಜಿಸಿದ್ಧಾರೆ. 

ದಕ್ಷಿಣ ಕನ್ನಡದಲ್ಲಿ ಮಧ್ಯಾಹ್ನದವರೆಗೆ ಬಸ್ ಸಂಚಾರಕ್ಕೆ ಅನುಮತಿ