Oct 28, 2019, 12:01 PM IST
ತುಮಕೂರು (ಅ.28): ಮೊನ್ನೆಯಷ್ಟೇ ಜೈಲಿನಿಂದ ಹೊರಬಂದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿರುವ ನಂಜಾವಧೂತ ಶ್ರೀ, ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದರು.
ದೇಶದ ಪ್ರಧಾನಿ ದೇಶದ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನಹರಿಸೋದು ಬಿಟ್ಟು ವೈಯುಕ್ತಿಕ ಟಾರ್ಗೆಟ್ ಮಾಡುತ್ತಿದ್ದಾರೆ. ಡಿಕೆಶಿಯನ್ನು ಕೆಣಕಿದರೆ ದೊಡ್ಡ ಶಕ್ತಿಯಾಗಿ ಹೊರಹೊಮ್ಮುತ್ತಾರೆ, ಎಂದು ಹೇಳಿದರು.
ಅಕ್ರಮ ಹಣ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ 48 ದಿನಗಳ ಕಾಲ ತಿಹಾರ್ ಜೈಲಿನಲ್ಲಿದ್ದ ಡಿಕೆಶಿಗೆ ಕಳೆದ ವಾರ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು.
ಬನ್ನಿ ಸ್ವಾಮೀಜಿ ಏನು ಹೇಳಿದ್ದಾರೆ ಕೇಳೋಣ....