Dec 25, 2020, 4:57 PM IST
ಬೆಂಗಳೂರು (ಡಿ. 25): ಸಾಕಷ್ಟು ಹೈಡ್ರಾಮಗಳ ನಂತರ ರಾತ್ರಿ ಕರ್ಫ್ಯೂವನ್ನು ಸರ್ಕಾರ ವಾಪಸ್ ಪಡೆದಿದೆ. ಆದರೆ ಹೊಸವರ್ಷಾಚರಣೆಗೆ ಟಫ್ ರೂಲ್ಸ್ ಜಾರಿಯಾಗಲಿದೆ. ಬೆಂಗಳೂರಿಗೆ ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ನಾಳೆ ಅಥವಾ ನಾಡಿದ್ದು ಹೊರಬೀಳುವ ಸಾಧ್ಯತೆ ಇದೆ.
ಹೊಸ ವರ್ಷಾಚರಣೆಯನ್ನು ಸರಳವಾಗಿ ಆಚರಿಸಿ. ಸುರಕ್ಷತಾ ದೃಷ್ಟಿಯಿಂದ ಹೆಚ್ಚು ಗುಂಪುಗೂಡದಂತೆ ಎಚ್ಚರ ವಹಿಸಿ. ಸಾರ್ವಜನಿಕರೇ ಸ್ವಯಂ ನಿರ್ಬಂಧ ವಿಧಿಸಿಕೊಳ್ಳಬೇಕೆಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.