News Hour ಈಶ್ವರಪ್ಪ ತಲೆದಂಡ, ಬರೀ ರಾಜೀನಾಮೆ ಅಲ್ಲ ಅರೆಸ್ಟ್ ಮಾಡಬೇಕು ಎಂದ ಕಾಂಗ್ರೆಸ್!

News Hour ಈಶ್ವರಪ್ಪ ತಲೆದಂಡ, ಬರೀ ರಾಜೀನಾಮೆ ಅಲ್ಲ ಅರೆಸ್ಟ್ ಮಾಡಬೇಕು ಎಂದ ಕಾಂಗ್ರೆಸ್!

Published : Apr 14, 2022, 11:51 PM IST

ಕ್ಲಾಸ್ 1 ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟದ ಮೊದಲ ವಿಕೆಟ್ ಅನ್ನು ಪಡೆದಿದೆ. ರಾಜೀನಾಮೆ ಕೊಡೋದೇ ಇಲ್ಲ ಎಂದು ಹೇಳಿದ್ದ ಈಶ್ವರಪ್ಪ ತಮ್ಮ ನಿರ್ಧಾರವನ್ನು ಬದಲಿಸಲು ಸಾಕಷ್ಟು ವಿಚಾರಗಳು ಕಾರಣವಾಗಿದೆ.
 

ಬೆಂಗಳೂರು (ಏ. 14): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (contractor Santosh Patil Suicide ) ಮತ್ತು ಅದರ ಬೆನ್ನಿಗೆ ಎದ್ದ 40% ಕಮೀಷನ್ ವಿಚಾರದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ (K S Eshwarappa)ಅವರ ತಲೆದಂಡವಾಗಿದೆ. ಗುರುವಾರ ಸುದ್ದಿಗೋಷ್ಠಿ ನಡೆಸಿದ ಕೆಎಸ್ ಈಶ್ವರಪ್ಪ, ಸಚಿವ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದರು.

ಒಂದೆಡೆ ಕಾಂಗ್ರೆಸ್ (Congress) ಪಕ್ಷ, ಈಶ್ವರಪ್ಪ ಅವರು ರಾಜೀನಾಮೆ ನೀಡಲೇಬೇಕು ಎಂದು ಪ್ರತಿಭಟನೆಗಳನ್ನು ನಡೆಸುತ್ತಿದ್ದರೆ, ಗುರುವಾರ ಬೆಳಗ್ಗೆಯಿಂದಲೇ ಈಶ್ವರಪ್ಪ ಅವರನ್ನು ಸಮರ್ಥಿಸಿಕೊಂಡು ಬಿಜೆಪಿಯ ಹಿರಿಯ ನಾಯಕರು ಹಾಗೂ ಸ್ವತಃ ಮುಖ್ಯಮಂತ್ರಿಗಳೇ ಮಾತನಾಡಿದ್ದರು. ಆದರೆ, ಹೈಕಮಾಂಡ್ ಈಶ್ವರಪ್ಪನವರ ರಾಜೀನಾಮೆ ತೆಗೆದುಕೊಳ್ಳಿ ಎಂದು ಸೂಚನೆ ನೀಡಿದ ಬೆನ್ನಲ್ಲಿಯೇ, ಹಿರಿಯ ನಾಯಕ ಸುದ್ದಿಗೋಷ್ಠಿ ನಡೆಸಿ ಶುಕ್ರವಾರ ಮಂತ್ರಿ ಪದವಿಗೆ ರಾಜೀನಾಮೆ ನೀಡುವುದಾಗಿ ಹೇಳಿದರು.

ಈಶ್ವರಪ್ಪ ಮಾತಿಗೆ ನಿಂತ್ರೆ ಬ್ರೇಕ್‌ ಫೇಲ್‌: ವಿವಾದಗಳ ಸರದಾರ ಈ ಸಕಲವಿವಾದವಲ್ಲಭ..

ಇಂದು ಸ್ವತಃ ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಹಾಗೂ ಎಂಬಿ ಪಾಟೀಲ್ ನೇತೃತ್ವದ ಕಾಂಗ್ರೆಸ್ ಘಟಾನುಘಟಿ ನಾಯಕರು ಮುಖ್ಯಮಂತ್ರಿಯ ಮನೆಯ ಮುಂದೆ ಧರಣಿ ನಡೆಸಿದ್ದಲ್ಲದೆ, ಬಂಧನಕ್ಕೂ ಒಳಗಾದರು. ಈಶ್ವರಪ್ಪ ರಾಜೀನಾಮೆ ನೀಡದೇ ಹೋದಲ್ಲಿ ಅಹೋರಾತ್ರಿ ಧರಣಿ ನಡೆಸುವುದಾಗಿ ಘೋಷಣೆ ಮಾಡಿದ್ದರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more