ವಿಸ್ತೃತ ಪೀಠಕ್ಕೆ ಹಿಜಾಬ್ ಫೈಟ್
ಸೂರತ್ ನಿಂದ 50 ಲಕ್ಷ ಕೇಸರಿ ಶಾಲು ಬಂದಿದೆ ಎಂದ ಡಿಕೆ ಶಿವಕುಮಾರ್
ಅಲ್ಲಾಹು ಅಕ್ಬರ್ ಎಂದು ಕೂಗಿದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ
ಬೆಂಗಳೂರು (ಫೆ.9): ಕರ್ನಾಟಕದಲ್ಲಿ ಹಿಜಾಬ್ (Hijab) ಹಗ್ಗಜಗ್ಗಾಟ ಮುಂದುವರಿದಿದೆ. ಸತತ 2ನೇ ದಿನ ಪ್ರಕರಣದ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್ (High Court) ಈ ಪ್ರಕರಣದಲ್ಲಿ ಸಾಂವಿಧಾನಿಕ ಪ್ರಶ್ನೆಗಳು ಇರುವುದರಿಂದ ಇದನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡುವುದಾಗಿ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಹೇಳಿದರು. ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ಮೂವರು ಸದಸ್ಯರ ವಿಸ್ತೃತ ಪೀಠ ಇನ್ನು ಮುಂದೆ ವಿಚಾರಣೆ ನಡೆಸಲಿದೆ.
ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೇವೆ, ಚರ್ಚೆಗೆ ಗ್ರಾಸವಾಯ್ತು ಈಶ್ವರಪ್ಪ ಮಾತು
ಇದರ ನಡುವೆ ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪಗಳು ಮುಂದುವರಿದಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar ), ಸೂರತ್ ನಿಂದ (Surat) ಕರ್ನಾಟಕಕ್ಕೆ 50 ಲಕ್ಷ ಕೇಸರಿ ಶಾಲುಗಳನ್ನು ತರಿಸಲಾಗಿದೆ ಎಂದು ಅರೋಪ ಮಾಡಿದ್ದರೆ, ಇದಕ್ಕೆ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಇನ್ನೊಂದೆಡೆ, ಮಂಡ್ಯ ಕಾಲೇಜಿನಲ್ಲಿ ಅಲ್ಲಾಹು ಅಕ್ಬರ್ ಎಂದು ಕೂಗಿದ ವಿದ್ಯಾರ್ಥಿನಿಗೆ ಜಮಾತ್ ಉಲೇಮಾ 5 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದೆ.