ಈಗ ರಾಜ್ಯ ರಾಜಧಾನಿಯಾದ ಬೆಂಗಳೂರು ಸಂಪೂರ್ಣ ಸೀಲ್‌ಡೌನ್ ಮಾಡುತ್ತಾರೆ ಎನ್ನುವ ಗಾಳಿ ಸುದ್ದಿಗಳಿಗೆ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್ ತೆರೆ ಎಳೆದಿದ್ದಾರೆ. ಬೆಂಗಳೂರು ಸೀಲ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಬೆಂಗಳೂರು(ಜು.10): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನಂಪ್ರತಿ ಸಾವಿರಕ್ಕೂ ಅಧಿಕ ಕೊರೋನಾ ಕೇಸ್‌ಗಳು ಪತ್ತೆಯಾಗುತ್ತಿವೆ. ಇದರ ಬೆನ್ನಲ್ಲೇ ಇಡೀ ಬೆಂಗಳೂರು ಸೀಲ್‌ಡೌನ್ ಆಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ಆದರೆ ಈಗ ರಾಜ್ಯ ರಾಜಧಾನಿಯಾದ ಬೆಂಗಳೂರು ಸಂಪೂರ್ಣ ಸೀಲ್‌ಡೌನ್ ಮಾಡುತ್ತಾರೆ ಎನ್ನುವ ಗಾಳಿ ಸುದ್ದಿಗಳಿಗೆ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್ ತೆರೆ ಎಳೆದಿದ್ದಾರೆ. ಬೆಂಗಳೂರು ಸೀಲ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಸುವರ್ಣ ನ್ಯೂಸ್ ಜತೆ ಮಾತನಾಡಿದ ಬಿಬಿಎಂಪಿ ಆಯುಕ್ತರು, ಕೊರೋನಾ ಸೋಂಕಿತರಿರುವವ ಏರಿಯಾಗಳನ್ನು ಮಾತ್ರವೇ ಸೀಲ್‌ಡೌನ್ ಮಾಡುತ್ತೇವೆ. ಆದರೆ ಸಂಪೂರ್ಣ ಬೆಂಗಳೂರನ್ನು ಸೀಲ್‌ಡೌನ್ ಮಾಡುವ ಸುದ್ದಿಯೇ ಸುಳ್ಳು ಎಂದು ಸ್ಪಷ್ಟವಾಗಿ ಪುನರುಚ್ಚರಿಸಿದ್ದಾರೆ.