ಈ ಬಾರಿ ಗಲ್ಲಿ ಗಲ್ಲಿಗಳಲ್ಲಿ, ರಸ್ತೆಗಳಲ್ಲಿ ಗಣೇಶನ ಮೂರ್ತಿ ಇಡಬಾರದು, ಮನೆಯಲ್ಲಿಯೇ ಗಣೇಶನನ್ನು ಪೂಜಿಸಬೇಕು ಎಂದು ಬಿಬಿಎಂಪಿ ಮಹತ್ವದ ಆದೇಶ ಪ್ರಕಟಿಸಿದೆ. ಈ ಕುರಿತಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಹತ್ವದ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು(ಜು.28): ಕೊರೋನಾ ಭೀತಿಯ ನಡುವೆ ಗಣೆಶೋತ್ಸವ ಹಬ್ಬದ ಆಚರಣೆಗೆ ದಿನಗಣನೆ ಆರಂಭವಾಗಿದೆ. ಹೀಗಿರುವಾಗಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗಣೇಶ ಹಬ್ಬದ ಕುರಿತಂತೆ ಮಹತ್ವದ ಆದೇಶ ಹೊರಡಿಸಿದೆ.
ಹೌದು, ಈ ಬಾರಿ ಗಲ್ಲಿ ಗಲ್ಲಿಗಳಲ್ಲಿ, ರಸ್ತೆಗಳಲ್ಲಿ ಗಣೇಶನ ಮೂರ್ತಿ ಇಡಬಾರದು, ಮನೆಯಲ್ಲಿಯೇ ಗಣೇಶನನ್ನು ಪೂಜಿಸಬೇಕು ಎಂದು ಬಿಬಿಎಂಪಿ ಮಹತ್ವದ ಆದೇಶ ಪ್ರಕಟಿಸಿದೆ. ಈ ಕುರಿತಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಹತ್ವದ ಆದೇಶ ಹೊರಡಿಸಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಹೀಗಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಅಗತ್ಯವಿರುವುದರಿಂದ ಬಿಬಿಎಂಪಿ ಗಲ್ಲಿ ಗಲ್ಲಿಗಳಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸುವುದಕ್ಕೆ ಬ್ರೇಕ್ ಹಾಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.