ದಕ್ಷಿಣ ಆಫ್ರಿಕಾದಿಂದ (south Africa) ರಾಜ್ಯಕ್ಕೆ ಆಗಮಿಸಿರುವ ಇಬ್ಬರಲ್ಲಿ ಕೊರೋನಾ ಸೋಂಕು (corona Virus) ದೃಢಪಟ್ಟಿದ್ದು, ಇದು ಡೆಲ್ಟಾ (Delta) ಮಾದರಿಯಾಗಿದೆ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ಬೆಂಗಳೂರು (ನ. 29): ದಕ್ಷಿಣ ಆಫ್ರಿಕಾದಿಂದ (south Africa) ರಾಜ್ಯಕ್ಕೆ ಆಗಮಿಸಿರುವ ಇಬ್ಬರಲ್ಲಿ ಕೊರೋನಾ ಸೋಂಕು (corona Virus) ದೃಢಪಟ್ಟಿದ್ದು, ಇದು ಡೆಲ್ಟಾ (Delta) ಮಾದರಿಯಾಗಿದೆ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಕ್ಷಿಣ ಆಫ್ರಿಕಾದಿಂದ ಕಳೆದ 20 ದಿನಗಳಲ್ಲಿ 94 ಪ್ರಯಾಣಿಕರು ಆಗಮಿಸಿದ್ದು, ಈ ಪೈಕಿ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಬಗ್ಗೆ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಿದ್ದು ಇದು ಪ್ರಸ್ತುತ ಆತಂಕ ಸೃಷ್ಟಿಸಿರುವ ಒಮಿಕ್ರೋನ್ ತಳಿ ಅಲ್ಲ. ಬದಲಿಗೆ ಈಗಾಗಲೇ ರಾಜ್ಯದಲ್ಲಿರುವ ಡೆಲ್ಟಾಮಾದರಿ ಎಂಬುದು ಸ್ಪಷ್ಟವಾಗಿದೆ. ಈ ಇಬ್ಬರೂ ದಕ್ಷಿಣ ಆಫ್ರಿಕಾದವರಾಗಿದ್ದು, ಒಬ್ಬರು ನ. 11ರಂದು, ಮತ್ತೊಬ್ಬರು ನ. 20ರಂದು ಬೆಂಗಳೂರಿಗೆ ಆಗಮಿಸಿದ್ದರು. ಇಬ್ಬರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.