
ಬೆಂಗಳೂರಿನಲ್ಲಿ ಆಯೋಜಿಸಿದ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮ ತರಾತುರಿಯಲ್ಲಿ ಆಯೋಜಿಸಿ 11 ಅಮಾಯಕರ ಸಾವಿಗೆ ಸರ್ಕಾಕರ ನೇರ ಹೊಣೆಯಾಗಿದೆ ಎಂದು ವಿಪಕ್ಷಗಳು ಆರೋಪಿಸಿದೆ. ಯಾರನ್ನೋ ತಲೆದಂಡ ಮಾಡಿ ನುಣುಚಿಕೊಳ್ಳುವ ಪ್ರಯತ್ನ ಬೇಡ, ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕಮಾರ್ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸಿದೆ
ಬೆಂಗಳೂರು(ಜೂ.06) ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತ ಪ್ರಕರಣದಿಂದ ರಾಜ್ಯವೇ ಬೆಚ್ಚಿ ಬಿದ್ದಿದೆ. 11 ಅಮಾಯಕರು ಬಲಿಯಾಗಿದ್ದಾರೆ. 56ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಹಾಗೂ ಪ್ರಚಾರದ ತೆವಲು ಕಾರಣ ಎಂದು ವಿಪಕ್ಷಗಳು ಆರೋಪಿಸಿದೆ. ದಕ್ಷ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವ ಬದಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹೊಣೆ ಹೊರಬೇಕು, ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಹಕ್ಕೋತ್ತಾಯ ಮಾಡಿದೆ.