ಎಲ್ಲ ಭಾಷೆಗಳೂ ಭಾರತೀಯತೆಯ ಆತ್ಮ, ಮೋದಿ ಹೇಳಿಕೆ ಸ್ವಾಗತಿಸಿದ ಕಿಚ್ಚ ಸುದೀಪ್!

ಎಲ್ಲ ಭಾಷೆಗಳೂ ಭಾರತೀಯತೆಯ ಆತ್ಮ, ಮೋದಿ ಹೇಳಿಕೆ ಸ್ವಾಗತಿಸಿದ ಕಿಚ್ಚ ಸುದೀಪ್!

Published : May 22, 2022, 04:38 PM ISTUpdated : May 22, 2022, 04:44 PM IST

ಇತ್ತೀಚೆಗೆ ಕೇಂದ್ರ ಸರ್ಕಾರವು ‘ಹಿಂದಿ ಹೇರಿಕೆ’ ಮಾಡುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವ ನಡುವೆಯೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಈ ಬಗ್ಗೆ ಮೌನ ಮುರಿದಿದ್ದಾರೆ.

ಇತ್ತೀಚೆಗೆ ಕೇಂದ್ರ ಸರ್ಕಾರವು ‘ಹಿಂದಿ ಹೇರಿಕೆ’ ಮಾಡುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವ ನಡುವೆಯೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಈ ಬಗ್ಗೆ ಮೌನ ಮುರಿದಿದ್ದಾರೆ. ‘ಭಾಷೆಯ ಆಧಾರದಲ್ಲಿ ಇಂದು ವಿವಾದ ಹುಟ್ಟಿಸುವ ಯತ್ನಗಳು ನಡೆಯುತ್ತಿದ್ದು, ಈ ಬಗ್ಗೆ ನಾಗರಿಕರು ಎಚ್ಚರದಿಂದ ಇರಬೇಕು. ಬಿಜೆಪಿ (BJP)ಎಲ್ಲ ಭಾರತೀಯ ಭಾಷೆಗಳನ್ನು ‘ಭಾರತೀಯತೆಯ ಆತ್ಮ’ ಎಂದು ಪರಿಗಣಿಸುತ್ತದೆ’ ಎಂದಿದ್ದಾರೆ. ಈ ಮೂಲಕ ಹಿಂದಿ ಹೇರಿಕೆ ಆರೋಪ ಮಾಡುತ್ತಿರುವ ಪಕ್ಷಗಳು ಹಾಗೂ ವ್ಯಕ್ತಿಗಳಿಗೆ ತಿರುಗೇಟು ನೀಡಿದ್ದಾರೆ.  ಭಾಷಾ ಸಾಮರಸ್ಯ ಕುರಿತಾದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಸ್ವಾಗತಿಸಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಎಲ್ಲ ಭಾಷೆಗಳೂ ಭಾರತೀಯತೆಯ ಆತ್ಮ ಎಂದಿದ್ದು ಸ್ವಾಗತಾರ್ಹ’ ಎಂದು ಹೇಳಿದರು. ಇದೇ ವೇಳೆ, ‘ಬಾಲಿವುಡ್‌ ನಟ ಅಜಯ ದೇವಗನ್‌ಗೆ (Ajay Devgan) ನೀಡಿದ್ದ ಪ್ರತಿ ಹೇಳಿಕೆ ಚರ್ಚೆ ಹುಟ್ಟುಹಾಕುವ ಅಥವಾ ದೇಶದಲ್ಲಿ ಭಾಷೆಯ ವಿವಾದವನ್ನು ಸೃಷ್ಟಿಸುವ ಉದ್ದೇಶ ಹೊಂದಿರಲಿಲ್ಲ’ ಎಂದು ಸ್ಪಷ್ಟನೆ ನೀಡಿದರು.

‘ದೇಶದಲ್ಲಿ ಯಾವುದೇ ಗಲಭೆ ಅಥವಾ ವಿವಾದ ಸೃಷ್ಟಿಸುವ ಉದ್ದೇಶದಿಂದ ನಾನು ಹೇಳಿಕೆ ನೀಡಿರಲಿಲ್ಲ. ಅದು ಅಚಾನಕ್ಕಾಗಿ ಆಗಿದ್ದು, ಟ್ವೀಟಿನಲ್ಲಿ ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೆಯಷ್ಟೇ. ಪ್ರಧಾನಿಯವರು ಕೂಡಾ ಎಲ್ಲ ಭಾಷೆಗಳನ್ನು ಗೌರವಿಸುವ ಕುರಿತಾದ ಹೇಳಿಕೆ ನೀಡಿದ್ದಾರೆ. ಇದು ಸ್ವಾಗತಾರ್ಹ. ತಮ್ಮ ತಮ್ಮ ಭಾಷೆಯನ್ನು ಗೌರವಿಸುವ ಪ್ರತಿಯೊಬ್ಬರಿಗೂ ಪ್ರಧಾನಿಯವರ ಹೇಳಿಕೆ ಸಂತಸ ನೀಡಿದೆ. ನಾನು ಕೇವಲ ಕನ್ನಡವನ್ನು ಪ್ರತಿನಿಧಿಸುತ್ತಿಲ್ಲ, ಪ್ರಧಾನಿಯವರ ಹೇಳಿಕೆಯಿಂದ ಎಲ್ಲರ ಮಾತೃಭಾಷೆಗೂ ಗೌರವ ಸಿಕ್ಕಂತಾಗಿದೆ. ಮೋದಿಯವರನ್ನು ನಾವು ಕೇವಲ ರಾಜಕಾರಣಿಯಾಗಿ ನೋಡುವುದಿಲ್ಲ, ಒಬ್ಬ ನಾಯಕನಾಗಿಯೂ ನೋಡುತ್ತೇವೆ’ ಎಂದರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more