ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಆಗ್ರಹಿಸಿ, ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡದುಕೊಂಡಿದೆ.
ಬೆಂಗಳೂರು (ಫೆ. 21): ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಆಗ್ರಹಿಸಿ, ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡದುಕೊಂಡಿದೆ. ಮಾರ್ಚ್ 4 ರವರೆಗೆ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸುವುದಾಗಿ ಜಯ ಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ.
'ಬೇರೆ ಬೇರೆ ಊರುಗಳಿಂದ ಜನ ಬಟ್ಟೆ, ಬುತ್ತಿ ಕಟ್ಟಿಕೊಂಡು ಬಂದು ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಅವರೆಲ್ಲರ ಕೋರಿಕೆ ಮೇರೆಗೆ ನಾವು ಮಾರ್ಚ್ 4 ರವರೆಗೆ ಧರಣಿ ಸತ್ಯಾಗ್ರಹ ನಡೆಸಲು ಸಿದ್ಧರಾಗಿದ್ದೇವೆ' ಎಂದು ಶ್ರೀಗಳು ತಿಳಿಸಿದ್ದಾರೆ.