2ಎ ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ, ಜೂ. 27 ಗಡುವು, ಸರ್ಕಾರಕ್ಕೆ ಡ್ಯಾಮೇಜ್.?

Jun 22, 2022, 1:05 PM IST

ಬೆಂಗಳೂರು (ಜೂ. 22):  ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ‘ಎ’ ಅಡಿ ಮೀಸಲಾತಿ  (2 A Reservation) ನೀಡುವುದಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲು ಸರ್ಕಾರ ಮುಂದಾಗಿದೆ. 

2023 ರ 'ನಮೋ' ಲೆಕ್ಕಾಚಾರ, 2 ತಿಂಗಳಿಗೊಮ್ಮೆ ಮೋದಿ ರಾಜ್ಯ ಪ್ರವಾಸ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸಮಾಜಕ್ಕೆ ಕೊಟ್ಟಮಾತಿನಂತೆ ನಡೆದುಕೊಳ್ಳುವಲ್ಲಿ ವಿಫಲರಾಗಿದ್ದು, ಅದಕ್ಕಾಗಿ 2ಎ ಮೀಸಲಾತಿಗೆ ಒತ್ತಾಯಿಸಿ ಜೂ. 27ರಂದು ಶಿಗ್ಗಾಂವಿಯ ಸಿಎಂ ಬೊಮ್ಮಾಯಿ ನಿವಾಸದ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. 

2ಎ ಮೀಸಲಾತಿಗೆ ಆಗ್ರಹಿಸಿ ಕಳೆದ ವರ್ಷದಿಂದ ಇದುವರೆಗೆ ನಾಲ್ಕು ಹಂತದ ಹೋರಾಟ ನಡೆಸಿದ್ದರೂ ಸರ್ಕಾರ ನಮ್ಮ ನ್ಯಾಯಸಮ್ಮತ ಬೇಡಿಕೆಗೆ ಸ್ಪಂದಿಸುವ ಕಾರ್ಯಕ್ಕೆ ಮುಂದಾಗಿಲ್ಲ. ಬಸವರಾಜ ಬೊಮ್ಮಾಯಿ ಸಿಎಂ ಆದನಂತರ ಅವರ ಮೇಲೆ ಸಮಾಜವು ದೊಡ್ಡ ನಿರೀಕ್ಷೆ ಹೊಂದಿತ್ತು. ಮೊದಲು ಪ್ರಾಮಾಣಿಕವಾಗಿ ಸ್ಪಂದಿಸಿದ್ದ ಅವರು ಮೀಸಲಾತಿ ನೀಡುವ ಭರವಸೆ ನೀಡಿದ್ದರು. ಆದರೆ, ಇದುವರೆಗೆ ಮೀಸಲಾತಿ ನೀಡುವ ಕುರಿತು ಸ್ಪಷ್ಟವಾಗಿ ಹೇಳುತ್ತಿಲ್ಲ ಎಂದು  ಬಸವಜಯ ಮೃತ್ಯುಂಜಯ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.