Mar 10, 2022, 6:16 PM IST
ಶಿವಮೊಗ್ಗ (ಮಾ. 10): ‘ಪಂಚಾಯತ್ ದಿವಸ್’ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮಕ್ಕೆ ಏ.24 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ.
ಈ ಬಗ್ಗೆ ಈಗಾಗಲೇ ಜಿಲ್ಲಾ ಪಂಚಾಯಿತಿ ಕಚೇರಿಗೆ ಪ್ರಧಾನಮಂತ್ರಿಗಳ ಕಚೇರಿಯಿಂದ ಪ್ರಾಥಮಿಕ ಮಾಹಿತಿ ಬಂದಿದೆ. ಆ ಪ್ರಕಾರ ಏ.24ರಂದು ಬೆಳಗ್ಗೆ 12 ಗಂಟೆಯಿಂದ 1 ಗಂಟೆವರೆಗೆ ಪ್ರಧಾನಮಂತ್ರಿ ಭೇಟಿ ನೀಡಲಿದ್ದಾರೆ. ದೇಶದ ಪ್ರಧಾನಿಯೊಬ್ಬರು ತಮ್ಮೂರಿಗೆ ಬರುವುದರ ಹಿನ್ನೆಲೆಯಲ್ಲಿ ಊರಿನಲ್ಲಿ ಹಬ್ಬದ ವಾತಾವರಣ ಕಂಡುಬರುತ್ತಿದೆ. ರಸ್ತೆಗಳ ನಿರ್ಮಾಣ, ಹೊಸ ಕಟ್ಟಡಗಳ ನಿರ್ಮಾಣ ನಡೆಯುತ್ತಿದ್ದು, ಕೆಲವು ಈಗಾಗಲೇ ಪೂರ್ಣಗೊಳ್ಳುವ ಹಂತದಲ್ಲಿದೆ.