Mar 20, 2022, 12:13 PM IST
ಪಾವಗಡ (ಮಾ. 20): ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಬಳಿ ಶನಿವಾರ ಬೆಳಗ್ಗೆ ಖಾಸಗಿ ಬಸ್ಸೊಂದು ಉರುಳಿ ಬಿದ್ದು ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸೇರಿ 6 ಮಂದಿ ಸಾವನ್ನಪ್ಪಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.