ಕೊರೊನಾ ಸೋಂಕಿನ ಲಕ್ಷಣಗಳುಳ್ಳ ವ್ಯಕ್ತ ಅಸಹಜ ಸಾವನ್ನಪ್ಪಿದ್ದಾರೆ. ಗ್ರಾಮದಲ್ಲಿ ವ್ಯಕ್ತಿಯ ಶವ ಸಂಸ್ಕಾರ ಮಾಡಲು ಗ್ರಾಮಸ್ಥರು ಅವಕಾಶ ನೀಡಿಲ್ಲ. ರೋಣ ತಾಲ್ಲೂಕು ಬಾಸಲಾಪುರ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ.
ಗದಗ (ಮೇ. 25):ಸೋಂಕಿನ ಲಕ್ಷಣಗಳುಳ್ಳ ವ್ಯಕ್ತ ಅಸಹಜ ಸಾವನ್ನಪ್ಪಿದ್ದಾರೆ. ಗ್ರಾಮದಲ್ಲಿ ವ್ಯಕ್ತಿಯ ಶವ ಸಂಸ್ಕಾರ ಮಾಡಲು ಗ್ರಾಮಸ್ಥರು ಅವಕಾಶ ನೀಡಿಲ್ಲ. ಊರ ಹೊರಗೆ ಆಂಬುಲೆನ್ಸ್‌ನಲ್ಲಿ ಶವವನ್ನಿಟ್ಟು ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ. ರೋಣ ತಾಲ್ಲೂಕು ಬಾಸಲಾಪುರ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ನಿನ್ನೆ ಬಾದಾಮಿ ಆಸ್ಪತ್ರೆಯಲ್ಲಿ ಹನಮಂತಪ್ಪ ತಳ್ಳಿಗೇರಿ ಎಂಬುವವರು ಮೃತಪಟ್ಟಿದ್ದರು. ಆಸ್ಪತ್ರೆ ಸಿಬ್ಬಂದಿಗೆ ತಿಳಿಸದೇ ಶವ ತಂದಿದ್ದಾರೆನ್ನುವುದು ಗ್ರಾಮಸ್ಥರ ಆರೋಪ.