ಪ್ರಧಾನಿ ಮಳೆ ಮೀಟಿಂಗ್ ಅಂತ್ಯ: ರಾಜ್ಯಕ್ಕೆ ನೆರವು ನೀಡುವುದಾಗಿ ಮೋದಿ ಭರವಸೆ

Aug 10, 2020, 3:40 PM IST

ಬೆಂಗಳೂರು (ಆ. 10): ಪ್ರಧಾನಿ ಮೋದಿ ಜೊತೆ ಮಳೆ ಪರಿಹಾರ ಸಭೆ ಮುಕ್ತಾಯಗೊಂಡಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಿದ್ದರು. 

ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಅನೇಕ ಕಡೆ ಪ್ರವಾಹ, ಭೂ ಕುಸಿತ, ಬೆಳೆ ನಾಶವಾಗಿದೆ. ಇದರ ಬಗ್ಗೆ ಅಧ್ಯಯನ ನಡೆಸಲು ವಿಶೇಷ ತಂಡವನ್ನು ರಚಿಸಬೇಕು. 4 NDRF ತಂಡವನ್ನು ಕಳುಹಿಸುವಂತೆ ಮನವಿ ಸಲ್ಲಿಸಲಾಗಿದೆ. ಮಳೆ, ಪ್ರವಾಹದಿಂದಾಗಿ 4 ಸಾವಿರ ಕೋಟಿ ನಷ್ಟ ಉಂಟಾಗಿದೆ. ತುರ್ತಾಗಿ ಹಣ ಬಿಡುಗಡೆ ಮಾಡಬೇಕು, ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡಬೇಕೆಂದು ಸಚಿವರು ಪ್ರಧಾನಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯಕ್ಕೆ ನೆರವು ನೀಡುವುದಾಗಿ ಬೊಮ್ಮಾಯಿ, ಅಶೋಕ್‌ಗೆ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. 

ಪ್ರಧಾನಿ ಮೋದಿ ಜೊತೆ ವಿಡಿಯೋ ಸಂವಾದ: ರಾಜ್ಯದ ಸಚಿವರಿಗೆ ಸಿದ್ದರಾಮಯ್ಯ ಸಲಹೆ