ಚಿಕ್ಕಬಳ್ಳಾಪುರ ಹಿರೇನಾಗವಲ್ಲಿ ಕ್ರಷರ್‌ನಲ್ಲಿ ಜಿಲೆಟಿನ್ ಸ್ಪೋಟಗೊಂಡು 6 ಮಂದಿ ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕರಿಗೆ ಮೋದಿ ಸಂತಾಪ ಸೂಚಿಸಿದ್ದಾರೆ.
ಚಿಕ್ಕಬಳ್ಳಾಪುರ (ಫೆ. 23): ಇಲ್ಲಿನ ಹಿರೇನಾಗವಲ್ಲಿ ಕ್ರಷರ್‌ನಲ್ಲಿ ಜಿಲೆಟಿನ್ ಸ್ಪೋಟಗೊಂಡು 6 ಮಂದಿ ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕರಿಗೆ ಮೋದಿ ಸಂತಾಪ ಸೂಚಿಸಿದ್ದಾರೆ. 'ಘಟನೆಯಿಂದ ಬಹಳ ನೋವಾಗಿದೆ. ಮೃತರ ಕುಟುಂಬಕ್ಕೆ ನಮ್ಮ ಸಂತಾಪಗಳು. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ' ಎಂದು ಟ್ವೀಟ್ ಮಾಡಿದ್ದಾರೆ.