Jan 16, 2024, 8:26 PM IST
ಕನ್ನಡದ ಹಾಡಿಗೆ (Kannada Song) ಪ್ರಧಾನಿ ನರೇಂದ್ರ ಮೋದಿ (Narendra Modi) ತಲೆದೂಗಿದ್ದಾರೆ. ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ. ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ (Sivasri Skandaprasad) ಅವರು ಯೂಟ್ಯೂಬ್ನಲ್ಲಿ ಹಾಡಿರುವ, ‘ಪೂಜಿಸಲೆಂದೇ ಹೂಗಳ ತಂದೆ’ ಹಾಡಿನ ಲಿಂಕ್ ಅನ್ನು ಎಕ್ಸ್ನಲ್ಲಿ ಹಂಚಿಕೊಂಡಿರುವ ಪ್ರಧಾನಿ, ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಿ ಮುಂದೆ ಕೊಂಡೊಯ್ಯುತ್ತವೆ ಎಂದಿದ್ದಾರೆ. ಕನ್ನಡದಲ್ಲಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ ಎಂದಿದ್ದಾರೆ.