Nov 17, 2022, 12:12 PM IST
ಬ್ರಾಹ್ಮಣರು ಮತ್ತು ಬ್ರಾಹ್ಮಣ್ಯ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಮಲ್ಲೇಶ್ ಹೇಳಿಕೆ ನೀಡಿದ್ದು, ವಿವಾದವಾಗಿ ಪರಿಣಮಿಸಿದೆ. ಈ ಹಿನ್ನೆಲೆ ಅವರ ವಿರುದ್ಧ ಸುಮೋಟೋ ಕೇಸ್ ದಾಖಲಿಸಿ ಬಂಧನಕ್ಕೆ ಆಗ್ರಹ ವ್ಯಕ್ತವಾಗುತ್ತಿದೆ. ಮಲ್ಲೇಶ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ. ಬ್ರಾಹ್ಮಣ ನಿಗಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಅವರು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ.