Jun 2, 2020, 5:59 PM IST
ಬೆಂಗಳೂರು (ಜೂ. 02): ಮಹಾರಾಷ್ಟ್ರದಲ್ಲಿ ಕೋವಿಡ್ 19 ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು ಅಲ್ಲಿಂದ ಬಂದವರಿಗೆ ಮತ್ತೊಂದು ಶಾಕ್ ಕಾದಿದೆ. ಕ್ವಾರಂಟೈನ್ ಅವಧಿಯನ್ನು ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ. ಸೋಂಕು ತಡೆಯುವ ಉದ್ದೇಶದಿಂದ 14 ದಿನಗಳ ಕಾಲ ಅವರನ್ನು ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಗೃಹ ಸಚಿವ ಬೊಮ್ಮಾಯಿ ಹೇಳಿದ್ದಾರೆ.
ಡ್ಯೂಟಿ ಮುಗಿದ ಮೇಲೆ ರಿಲ್ಯಾಕ್ಸ್ ಆಗೋಕೆ ವಿಕ್ಟೋರಿಯಾ ಆಸ್ಪತ್ರೆ ವಾರಿಯರ್ಸ್ ಏನ್ಮಾಡ್ತಾರೆ ನೋಡಿ..!
ಮಹಾರಾಷ್ಟ್ರದಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದ್ದು ಕರ್ನಾಟಕಕ್ಕೂ ಅದು ಕಂಟಕವಾಗಿದೆ. ಕರ್ನಾಟಕದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಲು 'ಮಹಾ' ಕೊಡುಗೆ ಬಹಳಷ್ಟಿದೆ. ಹೀಗಾಗಿ ಅಲ್ಲಿಂದ ಬಂದವರನ್ನು 14 ದಿನಗಳ ಕಾಲ ಕ್ವಾರಂಟೈನ್ ಮಾಡುವುದು ಅನಿವಾರ್ಯವಾಗಿದೆ.