
ಬೆಂಗಳೂರು (ಜು.26): ಕರ್ನಾಟಕದ ಚುನಾವಣೆಯಲ್ಲೂ ಅಕ್ರಮವಾಗಿ ಎಂದು ರಾಹುಲ್ ಗಾಂಧಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರೂ ಸಾಥ್ ನೀಡಿದ್ದಾರೆ.
ಬೆಂಗಳೂರು ಸೆಂಟ್ರಲ್‌ನಲ್ಲಿ ಚುನಾವಣೆ ಅಕ್ರಮ ನಡೆದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಕ್ಕದೆ, ವಿಧಾನಸಭೆ ಹೇಗೆ ಗೆಲುವು ಸಾಧಿಸಿದ್ದೀರಿ ಎಂದು BJP ನಾಯಕರು ಪ್ರಶ್ನೆ ಮಾಡಿದ್ದಾರೆ.
ಇನ್ನು ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ ನಿಜ.ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲೂ ಗೋಲ್ಮಾಲ್ ಆಗಿದೆ. ನಾನು ರಾಹುಲ್ ಗಾಂಧಿ ಹೇಳಿಕೆಯನ್ನು ಒಪ್ಪುತ್ತೇನೆ. ನಾನೂ ಬೆಂಗಳೂರು ಗ್ರಾಮಾಂತರದಲ್ಲಿ ತನಿಖೆ ನಡೆಸಿದ್ದೇನೆ. ಇಲ್ಲಿ ಅನೇಕ ಗೋಲ್ಮಾಲ್ ಗಳು ನಡೆದಿವೆ. ಸದ್ಯಕ್ಕೆ ನಾನು ಹೆಚ್ಚು ವಿಚಾರ ಪ್ರಸ್ತಾಪ ಮಾಡುವುದಿಲ್ಲ. ಮುಂದೆ ಈ ವಿಚಾರವಾಗಿ ಮಾತನಾಡುತ್ತೇನೆ ಎಂದಿದ್ದಾರೆ.