Dec 28, 2020, 11:56 AM IST
ಬೆಂಗಳೂರು (ಡಿ. 28): ಸೇಫ್ಟಿ ಪ್ರಾಜೆಕ್ಟ್ ಟೆಂಡರ್ ವಿವಾದ ಇನ್ನೂ ಬಗೆಹರಿದಿಲ್ಲ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿವಾದದ ಬಗ್ಗೆ ಚರ್ಚೆಯಾಗಲಿದೆ.
ನಿರ್ಭಯಾ ಯೋಜನೆ ಟೆಂಡರ್‌ಗೆ ಸಂಬಂಧಿಸಿದಂತೆ ಟೆಂಡರ್ ಆಹ್ವಾನ ಸಮಿತಿ ಅಧ್ಯಕ್ಷ ಹೇಮಂತ್ ನಿಂಬಾಳ್ಕರ್ ಅವರು ಸರ್ಕಾರಕ್ಕೆ ಮತ್ತು ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ರಾಜ್ಯ ಗೃಹ ಕಾರ್ಯದರ್ಶಿ ಡಿ.ರೂಪಾ ಆರೋಪ ಮಾಡಿದ್ದಾರೆ. ‘ಇ-ಟೆಂಡರ್ ಪ್ರಕ್ರಿಯೆ ಅತ್ಯಂತ ಪಾರದರ್ಶಕ ಹಾಗೂ ಪಕ್ಷಾತೀತವಾಗಿ ನಡೆಯುತ್ತಿದೆ. ಇ-ಟೆಂಡರ್ನಲ್ಲಿ ಬಿಇಎಲ್ ಕಂಪನಿಯನ್ನು ಅನರ್ಹಗೊಳಿಸಲಾಗಿತ್ತು ಎಂಬುದು ಸುಳ್ಳು. ವಾಸ್ತವವಾಗಿ ಯೋಜನೆಗೆ ಸಂಬಂಧಿಸಿದಂತೆ ಇದುವರೆಗೂ ಮೂರು ಟೆಂಡರ್ ಕರೆಯಲಾಗಿದೆ. ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಆಡಳಿತ) ಹೇಮಂತ್ ನಿಂಬಾಳ್ಕರ್ ಹೇಳಿದ್ದಾರೆ. ಈ ವಿವಾದ ಮುಗಿಯುವವರೆಗೆ ಇಬ್ಬರನ್ನೂ ಕಡ್ಡಾಯ ರಜೆಯ ಮೇರೆಗೆ ಕಳುಹಿಸ್ತಾರಾ..? ಸಭೆಯ ನಂತರ ನಿರ್ಧಾರ ಹೊರಬೀಳಲಿದೆ.