ಸಂತ ಶಿಶುನಾಳ ಶರೀಫರ ಜನ್ಮದಿನಾಚರಣೆ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ತತ್ವರಸಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಳಸದ ಗುರುಗೋವಿಂದ ಭಟ್ಟರ ತತ್ವ ಪದಗಳ ಆಧರಿತ ಈ ಕಾರ್ಯಕ್ರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಸಂತ ಶಿಶುನಾಳ ಶರೀಫರು ಹಾಗೂ ಗುರು ಗೋವಿಂಧ ಭಟ್ಟರ ತತ್ವ ಪದಗಳನ್ನು ಹಾಡಲಾಯಿತು.