Feb 20, 2020, 3:44 PM IST
ನವದೆಹಲಿ, (ಫೆ.20): ರೋಗಿ ಬಯಸಿದ್ದು ಹಾಲು ಅನ್ನ, ವೈದ್ಯ ಹೇಳಿದ್ದು ಹಾಲು ಅನ್ನ..ಎನ್ನುವಂತೆ ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಬಯಸಿದ್ದು ಅದೇ, ಇಂದು (ಗುರುವಾರ) ಸುಪ್ರೀಂಕೋರ್ಟ್ ಕೊಟ್ಟ ತೀರ್ಪು ಅದನ್ನೇ.
ಬೆಳಗಾವಿ ಗಡಿ, ಮಹದಾಯಿ ಸಮಸ್ಯೆ ನಿವಾರಣೆಗೆ ಕ್ರಮ: CM BSY
ಹೌದು...ಮಹದಾಯಿ ಜಲವಿವಾದ ನ್ಯಾಯಮಂಡಳಿ ಐ ತೀರ್ಪು ಪ್ರಶ್ನಿಸಿ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಸರ್ಕಾರಗಳು ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಸಮ್ಮತಿಸಿದ್ದು, ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡಿದೆ.
ನರಗುಂದ: ಮಹದಾಯಿ ಯೋಜನೆ ಜಾರಿಯಲ್ಲಿ ಸರ್ಕಾರದಿಂದ ರೈತರಿಗೆ ಅನ್ಯಾಯ
ಇದು ಮಹದಾಯಿ ಅಧಿಸೂಚನೆಗೆ ಆಗ್ರಹಿಸಿ ರಾಜ್ಯದ ರೈತರ ಹೋರಾಟಕ್ಕೆ ಜಯಸಿಕ್ಕಂತಾಗಿದೆ. ನೀರು ಹಂಚಿಕೆ ಪ್ರಮಾಣ ಹೆಚ್ಚಳ ಹಾಗೂ ಕೇಂದ್ರ ಸರ್ಕಾರ ಅಧಿಸೂಚನೆಗೆ ಕೋರಿ ಕರ್ನಾಟಕ ಸುಪ್ರೀಂಗೆ ಅರ್ಜಿ ಸಲ್ಲಿಸಿತ್ತು. ಆದ್ರೆ, ಇದರ ವಿರುದ್ಧವಾಗಿ ಗೋವಾ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.