ಬಜರಂಗದಳ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ರಾಜ್ಯ ಬಿಜೆಪಿ ನಾಯಕರ ಜೊತೆಗೆ ಕೇಂದ್ರದ ನಾಯಕರು ಘಟನೆ ಖಂಡಿಸಿ ಆಕ್ರೋಶ ಹೊರಹಾಕಿದ್ದಾರೆ. ಇದರ ನಡುವೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಅದೇ ಜಿಲ್ಲೆಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಸಿದ್ದು ಆಗ್ರಹಿಸಿದ್ದಾರೆ.
ಬಜರಂಗದಳ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ರಾಜ್ಯ ಬಿಜೆಪಿ ನಾಯಕರ ಜೊತೆಗೆ ಕೇಂದ್ರದ ನಾಯಕರು ಘಟನೆ ಖಂಡಿಸಿ ಆಕ್ರೋಶ ಹೊರಹಾಕಿದ್ದಾರೆ. ಇದರ ನಡುವೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಅದೇ ಜಿಲ್ಲೆಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಸಿದ್ದು ಆಗ್ರಹಿಸಿದ್ದಾರೆ. ಇನ್ನು ಸಿಎಂ ಬಸರವಾಜ್ ಬೊಮ್ಮಾಯಿ, ಅದೇ ಜಿಲ್ಲೆಯ ಕೆಎಸ್ ಈಶ್ವರಪ್ಪ ರಾಜೀನಾಮೆ ಕೇಳುವುದಿಲ್ಲ. ಭಂಡತನದ ನಾಯಕರಾಗಿರುವ ಕಾರಣ ಅವರಿಂದ ರಾಜೀನಾಮೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಸಿದ್ದು ಹೇಳಿದ್ದಾರೆ.