Shivamogga Riot: ಮೂವರು ಸೆರೆ, ಹರ್ಷನ ಮನೆ ಸುತ್ತ RAF ಸಿಬ್ಬಂದಿ ನಿಯೋಜನೆ

Feb 22, 2022, 10:23 AM IST

 ಶಿವಮೊಗ್ಗ (ಫೆ. 22): ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ಇಡೀ ಶಿವಮೊಗ್ಗ ನಗರದಲ್ಲಿ ವ್ಯಾಪಕ ಹಿಂಸಾಚಾರ ನಡೆದಿದೆ.  ದಿನವಿಡೀ ಉದ್ರಿಕ್ತ ಗುಂಪುಗಳು ಕಂಡ ಕಂಡಲ್ಲಿ ಆಸ್ತಿಪಾಸ್ತಿಗಳ ಮೇಲೆ ಕಲ್ಲು ತೂರಿ, ವಾಹನಗಳು, ಅಂಗಡಿಗಳಿಗೆ ಬೆಂಕಿ ಹಚ್ಚುವ ಮೂಲಕ ಹಿಂಸಾಚಾರಕ್ಕಿಳಿದಿದ್ದು, ಈ ವೇಳೆ 25ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.  ಖಾಸಿಫ್, ನದೀಂ ಎಂಬ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳ ಬಂಧನಕ್ಕೆ 3 ತಂಡಗಳನ್ನು ರಚಿಸಲಾಗಿದೆ. 

Shivamogga Riots: ವ್ಯಾಪಸಕ ಹಿಂಸೆ, 2 ದಿನ ನಿಷೇಧಾಜ್ಞೆ ವಿಸ್ತರಣೆ, ಶಾಲಾ-ಕಾಲೇಜುಗಳಿಗೂ ರಜೆ

ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು ಎರಡು ದಿನ ವಿಸ್ತರಿಸಲಾಗಿದೆ. ಇದೇ ವೇಳೆ, ಸೋಮವಾರ ರಾತ್ರಿ 10ರಿಂದ ಬುಧವಾರ ಬೆಳಗ್ಗೆ 6ರವರೆಗೆ ಕರ್ಫ್ಯೂ ಘೋಷಿಸಲಾಗಿದೆ. ಶಾಲಾ-ಕಾಲೇಜುಗಳಿಗೂ ರಜೆ ಮುಂದುವರಿಸಲಾಗಿದೆ. ಈ ಹಿಂದೆ ಜಿಲ್ಲೆಯಲ್ಲಿ ಕೆಲಸ ಮಾಡಿದ್ದ ಪೊಲೀಸ್‌ ಅಧಿಕಾರಿಗಳು, ಹೆಚ್ಚುವರಿ ಪೊಲೀಸ್‌ ಸಿಬ್ಬಂದಿಯನ್ನು ಕರೆಸಿಕೊಂಡು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶಿವಮೊಗ್ಗ ಹಿಂಸಾಚಾರದ ಬೆನ್ನಲ್ಲೇ ದಕ್ಷಿಣ ಕನ್ನಡ ಸೇರಿ ರಾಜ್ಯದ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.