Harsha Murder Case: ಎಸ್‌ಪಿ ಲಕ್ಷ್ಮೀ ಪ್ರಸಾದ್ ವರ್ಗಾವಣೆ ಸಾಧ್ಯತೆ

Feb 23, 2022, 1:59 PM IST

ಬೆಂಗಳೂರು (ಫೆ. 23): ಹರ್ಷ ಹತ್ಯೆ (Harsha Murder) ಬೆನ್ನಲ್ಲೇ ಶಿವಮೊಗ್ಗ ಎಸ್‌ಪಿ ಲಕ್ಷ್ಮೀ ಪ್ರಸಾದ್  (SP Lakshmi Prasad) ವರ್ಗಾವಣೆಯಾಗುವ ಸಾಧ್ಯತೆ ಇದೆ. ಹರ್ಷ ಕೊಲೆ ನಂತರ ಗಲಭೆ ನಿಯಂತ್ರಿಸುವಲ್ಲ ಎಸ್‌ಪಿ ಲಕ್ಷ್ಮೀ ಪ್ರಸಾದ್ ವಿಫಲರಾಗಿದ್ದಾರೆ ಎಂದು ವರ್ಗಾವಣೆಯಾಗುವ ಸಾಧ್ಯತೆ ಇದೆ. ಇಂದೇ ಆದೇಶ ಹೊರ ಬೀಳುವ ಸಾಧ್ಯತೆ ಇದೆ.

ಹರ್ಷ ಹತ್ಯೆ ಪ್ರಕರಣ ಸಂಬಂಧ 6 ಮಂದಿಯನ್ನು ಬಂಧಿಸಲಾಗಿದೆ. ಎಲ್ಲರೂ ಶಿವಮೊಗ್ಗದವರೇ ಆಗಿದ್ದು, ಕ್ರಿಮಿನಲ್‌ ಹಿನ್ನೆಲೆ ಹೊಂದಿದ್ದಾರೆ. ಇದೇ ವೇಳೆ 12 ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.