ಹಿಜಾಬ್ ಅನ್ನು ಸಮರ್ಥಿಸಿಕೊಳ್ಳುವ ಬರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದೆ.
ಹಿಜಾಬ್ ಅನ್ನು ಸಮರ್ಥಿಸಿಕೊಳ್ಳುವ ಬರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದೆ. ‘ಮುಸ್ಲಿಂ ಹೆಣ್ಣು ಮಕ್ಕಳು ತಲೆ ಮೇಲೆ ದುಪ್ಪಟ ಹಾಕಿದರೆ ತಪ್ಪೇನಿದೆ? ಹಿಂದೂ ಹೆಣ್ಣುಮಕ್ಕಳು ಮತ್ತು ಸ್ವಾಮೀಜಿಗಳು ತಲೆ ಮೇಲೆ ಬಟ್ಟೆಹಾಕಿಕೊಂಡರೆ ಅದನ್ನೂ ಪ್ರಶ್ನಿಸುತ್ತೀರಾ’ ಎಂದು ಸಿದ್ದರಾಮಯ್ಯ ಅವರು ಹೇಳಿದ್ದು ಇದಕ್ಕೆ ಬಿಜೆಪಿ ನಾಯಕರು ಮತ್ತು ರಾಜ್ಯದ ಹಲವು ಸ್ವಾಮೀಜಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು ಕೂಡಾ ಸಾಥ್ ನೀಡಿರುವುದು ವಿಷಾದನೀಯ ಬೆಳವಣಿಗೆ. ನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು' ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.