ಸಿಂಧೂರ, ಹಿಜಾಬ್ (Hijab) ಹಾಕಿಕೊಂಡ್ರೆ ಏನು ತೊಂದರೆ.? ಹಲವು ವರ್ಷಗಳಿಂದ ಹಿಜಾಬ್ ಹಾಕಿಕೊಂಡು ಬರ್ತಿದ್ದಾರೆ. ಹಲವು ವರ್ಷಗಳಿಂದ ಪಾಲಿಸಿಕೊಂಡ ಬಂದ ಸಂಪ್ರದಾಯಕ್ಕೆ ವಿರೋಧ ಬೇಡ. ಇದರಿಂದ ಯಾರಿಗೂ ತೊಂದರೆ ಇಲ್ಲ: ಸಿದ್ದರಾಮಯ್ಯ
ಬೆಂಗಳೂರು (ಫೆ. 20): ಸಿಂಧೂರ, ಹಿಜಾಬ್ ಹಾಕಿಕೊಂಡ್ರೆ ಏನು ತೊಂದರೆ.? ಹಲವು ವರ್ಷಗಳಿಂದ ಹಿಜಾಬ್ ಹಾಕಿಕೊಂಡು ಬರ್ತಿದ್ದಾರೆ. ಹಲವು ವರ್ಷಗಳಿಂದ ಪಾಲಿಸಿಕೊಂಡ ಬಂದ ಸಂಪ್ರದಾಯಕ್ಕೆ ವಿರೋಧ ಬೇಡ. ಇದರಿಂದ ಯಾರಿಗೂ ತೊಂದರೆ ಇಲ್ಲ. ಅವರ ಧರ್ಮ ಅವರಿಗೆ, ನಮ್ಮ ಧರ್ಮ ಅವರಿಗೆ. ಬಿಜೆಪಿಯವರು ರಾಜಕಾರಣಕ್ಕಾಗಿ ಈ ವಿವಾದ ಮಾಡುತ್ತಿದ್ದಾರೆ. ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡಲು ಯತ್ನಿಸುತ್ತಿದ್ದಾರೆ' ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಹಿಜಾಬ್ ವಿಷಯದ ಜೊತೆಗೆ ಕುಂಕುಮ, ಬಳೆ, ಗಣಪತಿ ಪೂಜೆ, ಸರಸ್ವತಿ ಪೂಜೆ ಬಗ್ಗೆ ಯಾರಾದರೂ ಮಾತನಾಡಿದರೆ ನಾಲಿಗೆ ಸೀಳಬೇಕಾದಿತು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.