ಮಾಜಿ ಸಿಎಂ ಎಸ್.ಎಂ. ಕೃಷ್ಣ ಅಂತಿಮ ದರ್ಶನ: ರಾಮನಗರ, ಚನ್ನಪಟ್ಟಣದಲ್ಲೂ ವ್ಯವಸ್ಥೆ

ಮಾಜಿ ಸಿಎಂ ಎಸ್.ಎಂ. ಕೃಷ್ಣ ಅಂತಿಮ ದರ್ಶನ: ರಾಮನಗರ, ಚನ್ನಪಟ್ಟಣದಲ್ಲೂ ವ್ಯವಸ್ಥೆ

Published : Dec 10, 2024, 05:07 PM IST

ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥಿವ ಶರೀರವು ಹಳೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಾಗಲಿದ್ದು, ಬಿಡದಿ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 9.30 ರಿಂದ ಪ್ರತಿ ಸ್ಥಳದಲ್ಲಿ 15-20 ನಿಮಿಷಗಳ ಕಾಲ ದರ್ಶನಕ್ಕೆ ಅವಕಾಶವಿದೆ.

ಮಾಜಿ ಸಿಎಂ ಎಸ್ ಎಂ‌ ಕೃಷ್ಣ ವಿಧಿವಶ ಹಿನ್ನೆಲೆಯಲ್ಲಿ ನಾಳೆ ರಾಮನಗರ ಹಾಗೂ ಚನ್ನಪಟ್ಟಣದಲ್ಲಿಯೂ ಅಂತಿಮ ದರ್ಶನದ ನೇರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಹಳೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಎಸ್ ಎಂ.ಕೃಷ್ಣ ಅವರ ಪಾರ್ಥಿವ ಶರೀರ ಸಾಗಲಿದೆ. ಬಿಡದಿ, ರಾಮನಗರ, ಚನ್ನಪಟ್ಟಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಈ ಬಗ್ಗೆ ರಾಮನಗರ ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಬಿಡದಿಯ ಬಿಜೆಎಸ್ ಸರ್ಕಲ್, ರಾಮನಗರ ಐಜೂರು ವೃತ್ತ ಹಾಗೂ ಚನ್ನಪಟ್ಟಣ ಗಾಂಧಿ ಭವನ ಬಳಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.

ಬೆಳಗ್ಗೆ 9.30 ಕ್ಕೆ ಬಿಡದಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುವುದು. ನಂತರ, ರಾಮನಗರದ ಐಜೂರು ವೃತ್ತ ಹಾಗೂ ಚನ್ನಪಟ್ಟಣದಲ್ಲಿ ಗಾಂಧಿ ಭವನದ ಬಳಿ ಸಾರ್ವಜನಿಕ ದರ್ಶನಕ್ಕೆ ಅವಕಾಶ‌ ಕಲ್ಪಿಸಲಾಗುತ್ತಿದೆ. ಪ್ರತಿ ಸ್ಥಳದಲ್ಲಿಯೂ 15 ರಿಂದ 20 ನಿಮಿಷಗಳು ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕೊಡಲಾಗುತ್ತದೆ. ಬಳಿಕ ಬೆಂಗಳೂರು-ಮೈಸೂರು ಹಳೆ ಹೆದ್ದಾರಿಯಲ್ಲಿ ಸೋಮನಹಳ್ಳಿ ತಲುಪಲಿರುವ ಎಸ್ ಎಂ ಕೃಷ್ಣ ಪಾರ್ಥೀವ ಶರೀರ ಒಕ್ಕಲಿಗ ಸಮುದಾಯದ ವಿಧಿ-ವಿಧಾನದಂತೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಈ ಬಗ್ಗೆ ರಾಮನಗರ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಮಾಹಿತಿ ನೀಡಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!