ರಮೇಶ್ ಜಾರಕೀಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಇಂದು ವಿಚಾರಣೆಗೆ ಹಾಜರಾಗುತ್ತಿಲ್ಲ. ಬದಲಿಗೆ ಮಾರ್ಚ್ 9 ಕ್ಕೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಬೆಂಗಳೂರು (ಮಾ. 04): ರಮೇಶ್ ಜಾರಕೀಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಇಂದು ವಿಚಾರಣೆಗೆ ಹಾಜರಾಗುತ್ತಿಲ್ಲ. ಬದಲಿಗೆ ಮಾರ್ಚ್ 9 ಕ್ಕೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಸೀಡಿ ಬಿಡುಗಡೆ ನಂತರ ನನಗೆ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ. ಸೂಕ್ತ ಭದ್ರತೆ ಇಲ್ಲದಿರುವುದರಿಂದ ಇಂದು ನಾನು ವಿಚಾರಣೆಗೆ ಹಾಜರಾಗುತ್ತಿಲ್ಲ. 9 ನೇ ತಾರೀಖಿನಂದು ಹಾಜರಾಗುತ್ತೇನೆಂದು ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಪತ್ರ ಬರೆದಿದ್ದಾರೆ.