SSLC ಪರೀಕ್ಷೆಯನ್ನು ನಡೆಸಬೇಕಾ? ರದ್ದುಗೊಳಿಸಬೇಕಾ? ತಜ್ಞರ ಅಭಿಪ್ರಾಯಗಳಿವು!

Jun 9, 2020, 5:19 PM IST

ಬೆಂಗಳೂರು (ಜೂ. 09): ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮಕ್ಕಳಿಗ ಯಾವಾಗ ಪರೀಕ್ಷೆ ನಡೆಸಬೇಕು ಎಂಬ ಗೊಂದಲ ಉಂಟಾಗಿತ್ತು. ತೆಲಂಗಾಣ ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರಗಡೆಗೊಳಿಸುವ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ತಮಿಳುನಾಡು ಸರ್ಕಾರ ಕೂಡಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದುಗೊಳಿಸಿದೆ. 

ತೆಲಂಗಾಣ ಬೆನ್ನಲ್ಲೇ ಮತ್ತೊಂದು ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು

ಕರ್ನಾಟಕದಲ್ಲೂ ಈ ಚರ್ಚೆ ಶುರುವಾಗಿದೆ. ಜೂನ್ 25 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತದೆ. ರದ್ದು ಮಾಡುವ ಪ್ರಶ್ನೆಯೇ ಇಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಪರೀಕ್ಷೆ ರದ್ದು ಮಾಡಬೇಕಾ? ನಡೆಸಬೇಕಾ? ಎಂಬುದರ ಬಗ್ಗೆ ತಜ್ಞರು ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ.