ತಮ್ಮ ಊರುಗಳತ್ತ ಕಾರ್ಮಿಕರು ವಾಪಸ್; ಕೆಎಸ್‌ಆರ್‌ಟಿಸಿಯಿಂದ ದುಪ್ಪಟ್ಟು ಹಣ ವಸೂಲಿ

May 2, 2020, 2:36 PM IST

ಲಾಕ್‌ಡೌನ್‌ನಿಂದ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ತಲುಪಿಸುವ ಪ್ರಕ್ರಿಯೆ ಶುರುವಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ಹೊರಟಿದ್ದಾರೆ. ಮೆಜೆಕ್ಟಿಕ್‌ನಲ್ಲಿ ಜನವೋ ಜನ! ಪ್ರತಿಯೊಬ್ಬ ಪ್ರಯಾಣಿಕನಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಒಂದು ಬಸ್ಸಿನಲ್ಲಿ ಶೇ. 50 ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಂದ ದುಪ್ಪಟ್ಟು ದರವನ್ನು ವಸೂಲಿ ಮಾಡುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಸಾಮಾನ್ಯ ಪ್ರಯಾಣ ದರಕ್ಕಿಂತ ದುಪ್ಪಟ್ಟು ಹಣ ವಸೂಲು ಮಾಡುತ್ತಿರುವ ಆರೋಪ ಕೇಳಿ ಬಂದಿದೆ. 

ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

"