ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಹೇಳಿಕೆಗೆ ಬಿಜೆಪಿ ನಾಯಕರು ಒಬ್ಬೊಬ್ಬರೇ ಪ್ರತಿಕ್ರಿಯಿಸುತ್ತಿದ್ದಾರೆ.
ಬೆಂಗಳೂರು (ಅ. 06): ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಹೇಳಿಕೆಗೆ ಬಿಜೆಪಿ ನಾಯಕರು ಒಬ್ಬೊಬ್ಬರೇ ಪ್ರತಿಕ್ರಿಯಿಸುತ್ತಿದ್ದಾರೆ.
ಪಿಡಿಒನಿಂದ ರಾಷ್ಟ್ರಪತಿವರೆಗೆ ಆರ್‌ಎಸ್‌ಎಸ್ ಕಾರ್ಯಕರ್ತರಿದ್ದಾರೆ. ಕೇವಲ 4 ಸಾವಿರ ಅಲ್ಲ, ಅದಕ್ಕೂ ಹೆಚ್ಚು ಜನ ಆರ್‌ಎಸ್‌ಎಸ್ ಕಾರ್ಯಕರ್ತರಿದ್ದಾರೆ. ಆರ್‌ಎಸ್‌ಎಸ್ ವ್ಯಕ್ತಿ ನಿರ್ಮಾಣ ಮಾಡುವ ಮೂಲಕ ರಾಷ್ಟ್ರ ನಿರ್ಮಾಣ ಮಾಡುವ ಸಂಘಟನೆ. ರಾಷ್ಟ್ರ ನಿರ್ಮಾಣದ ಬಗ್ಗೆ ಆಸಕ್ತಿ ಇಲ್ಲದವರು ಹೀಗೆಲ್ಲಾ ಮಾತನಾಡುತ್ತಾರೆ. ಇವರ ಬಗ್ಗೆ ಅನುಕಂಪವಿದೆ' ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿರುಗೇಟು ನೀಡಿದ್ದಾರೆ.