May 19, 2020, 1:55 PM IST
ಬೆಂಗಳೂರು (ಮೇ. 19): ಇಂದಿನಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಿದೆ. ಆದರೆ ಆರಂಭಿಕವಾಗಿ ಸಮಸ್ಯೆ ಎದುರಾಗಿದೆ. ಎಲ್ಲಾ ಜಿಲ್ಲೆಗಳಿಗೂ ಸರಿಯಾದ ಬಸ್ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಪರದಾಡುವಂತಾಯಿತು. ಉತ್ತರ ಕರ್ನಾಟಕ ಭಾಗದ ಜನರಿಗೆ ಬಸ್ ವ್ಯವಸ್ಥೆ ಇಲ್ಲದೇ ಪರದಾಡುತ್ತಿದ್ದರು. ಇದನ್ನು ಸುವರ್ಣ ನ್ಯೂಸ್ ವರದಿ ಮಾಡುತ್ತಿದ್ದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಬಸ್ ವ್ಯವಸ್ಥೆ ಮಾಡಿದ್ದಾರೆ. ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಬಸ್ ಸಂಚಾರಕ್ಕೆ ಅನುಮತಿಯೇನೋ ಸಿಕ್ಕಿದೆ ಆದ್ರೆ ಪ್ರಯಾಣಿಕರ ಪರದಾಟ ತಪ್ಪಿಲ್ಲ..!